ಸಾರಾಂಶ
ಕದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗಿದೆ.
ಕಾರವಾರ: ಕದ್ರಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 33 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗಿದೆ.
ಜಲಾಶಯದ 4 ಗೇಟ್ ಗಳಿಂದ 12 ಸಾವಿರ ಕ್ಯುಸೆಕ್ ಹಾಗೂ ವಿದ್ಯುತ್ ಉತ್ಪಾದನೆಯಿಂದ 21000 ಕ್ಯುಸೆಕ್ ಸೇರಿ ಒಟ್ಟು 33000 ಕ್ಯುಸೆಕ್ ನೀರು ಹೊರಬಿಡಲಾಗಿದೆ.ಕದ್ರಾ ಜಲಾಶಯದ ಗರಿಷ್ಟ ಮಟ್ಟವು 34.50 ಮೀಟರ್‌ಗಳಾಗಿದ್ದು, ಪ್ರಸ್ತುತ ಜಲಾಶಯದ ಮಟ್ಟವು 30 ಮೀಟರ್ ತಲುಪಿದೆ. ಜಲಾಶಯಕ್ಕೆ ಒಳ ಅರಿವಿನ ಪ್ರಮಾಣ 23,182 ಕ್ಯೂಸೆಕ್ ಆಗಿದೆ. ಈ ಹಿನ್ನೆಲೆಯಲ್ಲಿ ನೀರನ್ನು ಹೊರಬಿಡಲಾಗಿದೆ. ಅಣೆಕಟ್ಟೆಯ ಕೆಳಭಾಗದಲ್ಲಿ ಕಾಳಿ ನದಿ ತೀರದಲ್ಲಿನ ಜನತೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಕೆಪಿಸಿ ಕದ್ರಾ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.