ಸಾರಾಂಶ
ಕೊಪ್ಪಳ ಕ್ಷೇತ್ರದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ₹34 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯ ನೀಡಿದ್ದು, ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಕೊಪ್ಪಳ: ಕೊಪ್ಪಳ ಕ್ಷೇತ್ರದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ₹34 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಕಾತರಕಿ, ಹಲವಾಗಲಿ, ಬೋಚನಹಳ್ಳಿ, ಬೈರಾಪುರ ಗ್ರಾಮದಲ್ಲಿ ₹10.84 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿದ ಅವರು, ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯ ನೀಡಿದ್ದು, ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇವೆ. ಪ್ರಸಕ್ತ ವರ್ಷದಲ್ಲಿಯೇ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದರು.ಸದ್ಯ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ₹200 ಕೋಟಿ ವೆಚ್ಚದಲ್ಲಿ ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಲ್ಯಾಣ ಪಥದ ಯೋಜನೆಡಿಯಲ್ಲಿ ಕೂಡ ರಸ್ತೆಗಳ ಅಭಿವೃದ್ಧಿಗೆ ನಮ್ಮ ಕ್ಷೇತ್ರಕ್ಕೆ ₹34 ಕೋಟಿ ಅನುದಾನ ಮಂಜೂರು ಆಗಿದೆ. ರಸ್ತೆಗಳ ಅಭಿವೃದ್ಧಿಗೆ ಅಡಿಗಲ್ಲು ನೆರವೇರಿಸಿದ್ದೇನೆ. ಕಾಮಗಾರಿ ಕೂಡ ಪ್ರಾರಂಭ ಮಾಡಿದ್ದಾರೆ. ಗುಣಮಟ್ಟದ ಕಾಮಗಾರಿ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಪ್ರಮುಖರಾದ ಹನುಮರಡ್ಡಿ ಅಂಗನಕಟ್ಟಿ, ಭರಮಪ್ಪ ಹಟ್ಟಿ, ಗಾಳೆಪ್ಪ ಪೂಜಾರ್, ವೆಂಕನಗೌಡ್ರು ಹಿರೇಗೌಡ್ರು, ಭೀಮಣ್ಣ ಬೋಚನಹಳ್ಳಿ, ಯಲ್ಲನ ಗೌಡ್ರು, ಮಂಜುನಾಥ ಹಂದ್ರಾಳ, ತೋಟಪ್ಪ ಸಿಂಟ್ರ, ಬಸವರಾಜ ಇಂದಿರಗಿ, ಅನ್ವರ್ ಗಡಾದ್, ನಿಂಗಪ್ಪ ಮೇಟಿ, ಪರಶುರಾಮ್ ಬೈರಾಪುರ, ತಹಸೀಲ್ದಾರ್ ವಿಠ್ಠಲ ಚೌಗಲೆ, ತಾಪಂ ಇಒ ದುಂಡೇಶ್ ತುರಾದಿ, ಮಲ್ಲು ಪೂಜಾರ್, ಗವಿಸಿದ್ದನಗೌಡ ಮುದ್ದಾಬಳ್ಳಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ ಇತರರಿದ್ದರು.