ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರನಗರದ ಶಂಕರಪುರ ಬಡಾವಣೆ ಸಮೀಪವಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನ ಮಹೋತ್ಸವ ಬುಧವಾರ ನಡೆಯಿತು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಶಂಕರಪುರ ಬಡಾವಣೆ ಸಮೀಪವಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧನ ಮಹೋತ್ಸವ ಬುಧವಾರ ನಡೆಯಿತು.ಆರಾಧನ ಮಹೋತ್ಸವ ಅಂಗವಾಗಿ ಬುಧವಾರ ದೇವರಿಗೆ ಸುಪ್ರಭಾತ, ರೇಷ್ಮೆ ವಸ್ತ್ರ ಸಮರ್ಪಣೆ, ಬೆಳ್ಳಿ ಕವಚಧಾರಣೆ, ಪುಷ್ಪಾಲಂಕಾರ ಕನಕಾಭಿಷೇಕ ಅಲಂಕಾರ ಬ್ರಾಹ್ಮಣರ ಆರಾಧನೆ ಮಾಡಿ ಮಹಾಮಂಗಳಾರತಿ ಮಾಡಲಾಯಿತು. ಮಧ್ಯಾಹ್ನ 12.30ಕ್ಕೆ ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
ಸಂಜೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ನೂರಾರು ಭಕ್ತರು ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಕುಟುಂಬ ಸಮೇತ ಆಗಮಿಸಿ ರಾಯರ ದರ್ಶನ ಪಡೆದರು. ಈ ಸಂದರ್ಭದಲ್ಲಿ ರಾಘವೇಂದ್ರ ಸ್ವಾಮಿ ಮಠದ ವಾಸದೇವರಾವ್, ಅರ್ಚಕರಾದ ಪವನ್ ಆಚಾರ್ ಹಾಗೂ ಶ್ರೀಧರಾಚಾರ್, ರಾಘವೇಂದ್ರ, ಕೃಷ್ಣ ವಾಸುದೇವರಾವ್, ಸತೀಶ್ ಸಿಬ್ಬಂದಿಗಳು ಹಾಜರಿದ್ದರು. ಗುರುವಾರ ಶ್ರೀ ಗುರು ರಾಘವೇಂದ್ರ ಸ್ವಾಮಿ ಪಲ್ಲಕ್ಕಿ ಉತ್ಸವ ಊರಿನ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಶ್ರೀ ರಾಘವೇಂದ್ರ ಸೇವಾ ಸಮಿತಿ ಮನವಿ ಮಾಡಿದೆ.