ಅಪಘಾತದಿಂದ ಜಿಲ್ಲೆಯಲ್ಲಿ ವರ್ಷಕ್ಕೆ 363 ಜನ ಸಾವು

| Published : Feb 01 2025, 12:00 AM IST

ಸಾರಾಂಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅಪಘಾತದಲ್ಲಿ 2024-25ನೇ ಸಾಲಿನಲ್ಲಿ 363 ಜನ ಪ್ರಾಣ ತೆತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅಪಘಾತದಲ್ಲಿ 2024-25ನೇ ಸಾಲಿನಲ್ಲಿ 363 ಜನ ಪ್ರಾಣ ತೆತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.

ನಗರದ ಕೋಟೆ ಪೊಲೀಸ್ ಗೆಸ್ಟ್ ಹೌಸ್ ಆವರಣದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಅರಿವು ಮೂಡಿಸುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್, ಶಿವಮೊಗ್ಗ ನಗರ ಸಂಚಾರ ಪೊಲೀಸ್ ವತಿಯಿಂದ ಶುಕ್ರವಾರ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ರಸ್ತೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಜಾಗೃತಿ ಪ್ರದರ್ಶನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೈಕ್‌ ಚಾಲನೆ ಮಾಡುವಾಗ ಐಎಸ್‌ಐ ಮಾರ್ಕ್‌ನ ಹೆಲ್ಮೆಟ್ ಧರಿಸಬೇಕು. ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಸೀಟ್ ಬೆಲ್ಟ್ ಅನ್ನು ಕಡ್ಡಾಯವಾಗಿ ಧರಿಸಬೇಕು. ವಿದ್ಯಾರ್ಥಿಗಳು 18 ವರ್ಷಕ್ಕಿಂತ ಕೆಳಗಿನವರು ವಾಹನ ಚಲಾಯಿಸುವಂತಿಲ್ಲ. ತ್ರಿಬಲ್ ರೇಡ್ ಮಾಡುವ ಹಾಗಿಲ್ಲ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವಂತಿಲ್ಲ. ನಿಯಮಗಳನ್ನು ಉಲ್ಲಂಘಿಸಿದಾಗ ಆಗುವ ಅನಾಹುತಗಳ ಬಗ್ಗೆ ಈ ಪದರ್ಶನದ ಮೂಲಕ ವಿವರಿಸಲಾಗಿದೆ. ಅಲ್ಲದೇ ಟ್ರಾಫಿಕ್ ನಿಯಮಗಳ ಫಲಕಗಳನ್ನು ಪ್ರದರ್ಶಿಸಲಾಗಿದೆ ಎಂದು ತಿಳಿಸಿದರು.ಈ ಸಂಚಾರಿ ಅರಿವು ಕಾರ್ಯಕ್ರಮದ ಉಪಯೋಗವನ್ನು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಯುವ ಜನತೆ ಪಡೆದುಕೊಳ್ಳಬೇಕು ಎಂದು ವಿನಂತಿಸಿದರು.ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಅನಿಲ್‌ಕುಮಾರ್ ಭೂಮರಡ್ಡಿ, ಕಾರಿಯಪ್ಪ, ಡಿವೈಎಸ್‌ಪಿಗಳಾದ ಸಂಜೀವ್ ಕುಮಾರ್, ಬಾಬು ಅಂಜನಪ್ಪ, ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್, ಸಬ್‌ಇನ್ಸ್‌ ಪೆಕ್ಟರ್ ತಿರುಮಲೇಶ್, ನವೀನ್ ಮಠಪತಿ ಸೇರಿದಂತೆ ಹಲವರಿದ್ದರು.