ಪಹಣಿಗೆ ಆಧಾರ್ ಜೋಡಣೆಯಲ್ಲಿ ಜಿಲ್ಲೆಗೆ 3ನೇ ಸ್ಥಾನ: ಡಿಸಿ

| Published : Jun 18 2024, 12:49 AM IST

ಪಹಣಿಗೆ ಆಧಾರ್ ಜೋಡಣೆಯಲ್ಲಿ ಜಿಲ್ಲೆಗೆ 3ನೇ ಸ್ಥಾನ: ಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‌ ಮಾಹಿತಿ ಪಹಣಿಗೆ ಜೋಡಿಸಿದ್ದು, ಈ ಸಾಧನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಶೇ80ಕ್ಕಿಂತ ಹೆಚ್ಚು ಸಾಧನೆಗೈದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸನ್ಮಾನ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದೆ. ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್‌ ಮಾಹಿತಿ ಪಹಣಿಗೆ ಜೋಡಿಸಿದ್ದು, ಈ ಸಾಧನೆಯಲ್ಲಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.

ಆನಗೋಡು ಬಳಿಯ ಸೈನ್ಸ್ ಭವನದಲ್ಲಿ ನಡೆದ ಜಿಲ್ಲೆಯ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 425708 ಖಾತೆದಾರರ ಆಧಾರ್ ಜೋಡಣೆ ಮಾಡಲಾಗಿದೆ. ಮರಣ, ಭೂ ಪರಿವರ್ತನೆಯಾದ 109955 ಸೇರಿ 535663 ಆಧಾರ್ ಜೋಡಣೆ ಮಾಡುವ ಮೂಲಕ ಶೇ 64.73 ರಷ್ಟು ಆಧಾರ್ ಜೋಡಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪೌತಿ ಖಾತೆ ಆಂದೋಲನ ಕೈಗೊಳ್ಳಬೇಕೆಂದು ತಿಳಿಸಿದರು.

ಕಂದಾಯ ಗ್ರಾಮ:

ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಲು 81 ಪ್ರಸ್ತಾವನೆಗಳಿದ್ದು, ಇವುಗಳಲ್ಲಿ ಈಗಾಗಲೇ 35 ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ. ಇನ್ನುಳಿದ ಗ್ರಾಮಗಳನ್ನು ಆದಷ್ಟು ಬೇಗನೆ ಅಧಿಸೂಚನೆ ಹೊರಡಿಸಲು ಕ್ರಮಕೈಗೊಳ್ಳಲು ಸೂಚನೆ ನೀಡಿದರು.

ಕೆರೆಗಳ ಒತ್ತುವರಿ ತೆರವು:

ಜಿಲ್ಲೆಯಲ್ಲಿ 538 ಕೆರೆಗಳಿದ್ದು, 23292 ಎಕರೆ ಪ್ರದೇಶ ವಿಸ್ತೀರ್ಣ ಹೊಂದಿರುತ್ತದೆ. ಇದರಲ್ಲಿ 486 ಕೆರೆಗಳ ಅಳತೆ ಮಾಡಿ 16604.22 ಎಕರೆ ವಿಸ್ತೀರ್ಣ ಗುರುತಿಸಲಾಗಿದೆ. ಅಳತೆ ಮಾಡಲು 52 ಕೆರೆಗಳಿಂದ 6687.24 ಎಕರೆ ಅಳತೆಗೆ ಬಾಕಿ ಇರುತ್ತದೆ. ಅಳತೆ ಮಾಡಿದ 283 ಕರೆಗಳಲ್ಲಿ 1816.39 ಎಕರೆ ಒತ್ತುವರಿ ಪ್ರದೇಶವೆಂದು ಗುರುತಿಸಿ, 37 ಕೆರೆಗಳ 66.38 ಎಕರೆ ವಿಸ್ತೀರ್ಣ ತೆರವು ಮಾಡಲಾಗಿದೆ. ಇನ್ನೂ 246 ಕೆರೆಗಳ 1750 ಎಕರೆ ವಿಸ್ತೀರ್ಣ ತೆರವಿಗೆ ಬಾಕಿ ಇದ್ದು 203 ಕೆರೆಗಳು 14787 ಎಕರೆ ವಿಸ್ತೀರ್ಣದಲ್ಲಿದ್ದು, ಯಾವುದೇ ಒತ್ತುವರಿ ಆಗಿರುವುದಿಲ್ಲ. ಒತ್ತುವರಿಯಾದ ಕೆರೆಗಳನ್ನು ಶೀಘ್ರದಲ್ಲಿ ತೆರವು ಮಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

538 ಕೆರೆಗಳಲ್ಲಿ 212 ಪಂಚಾಯತ್‌ರಾಜ್ ವಿಭಾಗ, 82 ಸಣ್ಣ ನೀರಾವರಿ, 36 ಜಲಸಂಪನ್ಮೂಲ ಇಲಾಖೆ, 2 ಮಹಾನಗರ ಪಾಲಿಕೆ, 144 ಗ್ರಾಮ ಪಂಚಾಯಿತಿ ಕೆರೆ, 28 ಅರಣ್ಯ, ಕೆಪಿಸಿಎಲ್ 2, ಎಸ್.ಎಸ್.ಎಲ್.ಆರ್.2 ಹಾಗೂ ಇತರೆ 30 ಸೇರಿವೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಅಭಿಷೇಕ್, ತಾಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- - -

ಬಾಕ್ಸ್ * ಸರ್ಕಾರಿ ಜಾಗ ತಡೆಗೆ ಲ್ಯಾಂಡ್‌ ಬೀಟ್ ಸರ್ಕಾರಿ ಜಾಗದ ಒತ್ತುವರಿ ತೆರವುಗೊಳಿಸಿ ಜಿಯೋ ಫೆನ್ಸಿಂಗ್ ಮಾಡುವ ಕೆಲಸ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ 19408 ಸರ್ಕಾರದ ಆಸ್ತಿಗಳನ್ನು ಗುರುತಿಸಲಾಗಿದೆ. ಇದರಲ್ಲಿ ಹರಿಹರ 2599, ಜಗಳೂರು 2662, ದಾವಣಗೆರೆ 5664, ಹೊನ್ನಾಳಿ 2482, ಚನ್ನಗಿರಿ 3672, ನ್ಯಾಮತಿ 2329 ಆಸ್ತಿಗಳಿವೆ. ಇದರಲ್ಲಿ 10956 ಆಸ್ತಿಗಳನ್ನು ಗುರುತಿಸಿ ಜಿಯೋ ಫೆನ್ಸಿಂಗ್ ಮಾಡಲಾಗಿದೆ. ಉಳಿದ 8452 ಆಸ್ತಿಗಳನ್ನು ರಕ್ಷಣೆ ಮಾಡಲು ಡಿಸಿ ತಿಳಿಸಿದರು.

- - - -15ಕೆಡಿವಿಜಿ38ಃ:

ದಾವಣಗೆರೆಯ ಸೈನ್ಸ್ ಭವನದಲ್ಲಿ ನಡೆದ ಜಿಲ್ಲೆ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಗ್ರಾಮ ಆಡಳಿತ ಅಧಿಕಾರಿಗಳನ್ನು ಸನ್ಮಾನಿಸಿದರು.