ಕಳೆದ ವರ್ಷ ಉಡುಪಿ ಜಿಲ್ಲೆಗೆ 4.50 ಕೋಟಿ ಪ್ರವಾಸಿಗರ ಭೇಟಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

| Published : Jan 26 2025, 01:30 AM IST

ಕಳೆದ ವರ್ಷ ಉಡುಪಿ ಜಿಲ್ಲೆಗೆ 4.50 ಕೋಟಿ ಪ್ರವಾಸಿಗರ ಭೇಟಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ಆಯೋಜಿಸಿತ್ತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಜಿಲ್ಲೆಗೆ ಕಳೆದ ಸಾಲಿನಲ್ಲಿ 4.5 ಕೋಟಿಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ಅತಿಥಿಗಳಂತೆ ಕಂಡು, ಪ್ರವಾಸಿಗರ ರಕ್ಷಣೆ ಹಾಗೂ ಅನುಕೂಲಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.ಅವರು ಇಲ್ಲಿನ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ವತಿಯಿಂದ ಕೃಷಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾದ ಕೃಷಿ ಪ್ರವಾಸೋದ್ಯಮದ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಶೇ.70ಕ್ಕಿಂತ ಹೆಚ್ಚು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ. ಕೃಷಿ ಕ್ಷೇತ್ರವನ್ನು ಪ್ರವಾಸೋದ್ಯಮದ ಭಾಗವಾಗಿರಬೇಕು ಎಂಬ ಮುಖ್ಯ ಉದ್ದೇಶದಿಂದ ಅದನ್ನು ಉತ್ತೇಜಿಸಬೇಕು. ಇತ್ತಿಚೀನ ದಿನಗಳಲ್ಲಿ ಕೃಷಿ ಪ್ರವಾಸೋದ್ಯಮವು ಬೆಳೆಯುತ್ತಿದೆ. ಇದರ ಭಾಗಿದಾರರಿಗೆ ಸರ್ಕಾರ ವತಿಯಿಂದ ಸಹಕಾರ ನೀಡಲಾಗುವುದು ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್, ಲಾಂಛನ ಅನಾವರಣ ಮಾಡಿ ಮಾತನಾಡಿ, ಕೃಷಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು, ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರಜ್ಞಾವಂತರಾದ ಜಿಲ್ಲೆಯ ಜನರು ಸಂಸ್ಕಾರಯುತವಾಗಿ ಪ್ರವಾಸಿಗರೊಂದಿಗೆ ನಡೆದುಕೊಂಡು ಹೆಚ್ಚೆಚ್ಚು ಜನರನ್ನು ಆಕರ್ಷಿಸಬೇಕು ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕೃಷಿ ಪ್ರವಾಸೋಧ್ಯಮದಲ್ಲಿ ಭಾರಿ ಬಂಡವಾಳ ಹೂಡಿಕೆಯ ಅವಶ್ಯಕತೆ ಇರುವುದಿಲ್ಲ, ಇದರಿಂದ ಕೃಷಿಯ ಆದಾಯದ ಜೊತೆಗೆ ಹೆಚ್ಚುವರಿ ಆದಾಯ ಹೊಂದಲು ಸಾಧ್ಯ ಎಂದರು.ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಂಘ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿದರು. ಪ್ರಗತಿಪರ ಕೃಷಿಕ ಇನ್ನಾ ಚಂದ್ರಕಾಂತ್ ರಾವ್ ಅವರು ಕೃಷಿ ಚಟುವಟಿಕೆ ಹಾಗೂ ಪ್ರವಾಸೊಧ್ಯಮ ಕುರಿತು ಉಪನ್ಯಾಸ ನೀಡಿದರು.ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ನೂತನ ವೆಬ್‌ಸೈಟ್ ಅನಾವರಣಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು., ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.