ಗೃಹಲಕ್ಷ್ಮಿ ಯೋಜನೆಯಿಂದ 4,756 ಮಹಿಳೆಯರು ಹೊರಕ್ಕೆ

| Published : Oct 17 2025, 01:00 AM IST

ಸಾರಾಂಶ

ರಾಮನಗರ: ಆದಾಯ ತೆರಿಗೆ ಮತ್ತು ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವ ಕುಟುಂಬಕ್ಕೆ ಸೇರಿರುವ ಜಿಲ್ಲೆಯಲ್ಲಿ 4,756 ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾಗಿದೆ.

ರಾಮನಗರ: ಆದಾಯ ತೆರಿಗೆ ಮತ್ತು ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವ ಕುಟುಂಬಕ್ಕೆ ಸೇರಿರುವ ಜಿಲ್ಲೆಯಲ್ಲಿ 4,756 ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾಗಿದೆ.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಮಾಸಿಕ 2 ಸಾವಿರ ಪಾವತಿಸುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಆದಾಯ ತೆರಿಗೆ ಮತ್ತು ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವ ಕುಟುಂಬದ ಸ್ತ್ರೀಯರನ್ನು ಹೊರ ಹಾಕಲಾಗುತ್ತಿದೆ.

ಮಹಿಳೆಯಗೆ ಆರ್ಥಿಕ ಬಲ ತುಂಬಿ ಸ್ವಾವಲಂಬಿಗಳನ್ನಾಗಿ ಮಾಡುವ ಆಶಯದೊಂದಿಗೆ ರಾಜ್ಯ ಸರ್ಕಾರವು ಮಹಿಳೆಯ ಬ್ಯಾಂಕ್ ಖಾತೆಗೆ 2 ಸಾವಿರ ಮೊತ್ತವನ್ನು ನೇರ ನಗದು ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯನ್ನು 2023ರ ಆಗಸ್ಟ್ ನಿಂದ ಜಾರಿಗೆ ತಂದಿದೆ.

2025ರ ಅಕ್ಟೋಬರ್ ವೇಳೆಗೆ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ 2,94,399 ಮಹಿಳೆಯರು ಗುರಿ ಇದ್ದು, 2,80,673 ಮಹಿಳೆಯರು ಸೇರ್ಪಡೆಯಾಗಿ ಸಾಧನೆ ಮಾಡಲಾಗಿದೆ. ಅಂದರೆ ಶೇಕಡ 95.34 ರಷ್ಟು ಪ್ರಗತಿ ಸಾಧಿಸಲಾಗಿದೆ.

ಈಗ ಜಿಲ್ಲೆಯಲ್ಲಿ ಯೋಜನೆಯಿಂದ ಕೈ ಬಿಡಲಾಗಿರುವ 4,756 ಮಹಿಳೆಯರಲ್ಲಿ ರಾಮನಗರ ಮೊದಲಿದ್ದರೆ, ಮಾಗಡಿ ಕಡೆಯ ಸ್ಥಾನದಲ್ಲಿದೆ. ರಾಮನಗರದಲ್ಲಿ 1,736 ಮಹಿಳೆಯರು, ಎರಡನೇ ಸ್ಥಾನದಲ್ಲಿರುವ ಕನಕಪುರದಲ್ಲಿ 1,236, ಮೂರನೇ ಸ್ಥಾನದಲ್ಲಿರುವ ಚನ್ನಪಟ್ಟಣದಲ್ಲಿ 1,189 ಹಾಗೂ ಕಡೆಯ ಸ್ಥಾನದಲ್ಲಿರುವ ಮಾಗಡಿಯಲ್ಲಿ 595 ಮಹಿಳೆಯರು ಗೃಹಲಕ್ಷ್ಮಿ ಹಣದಿಂದ ವಂಚಿತರಾಗಿದ್ದಾರೆ.

ಗೃಹಲಕ್ಷ್ಮಿ ಸೌಲಭ್ಯ ಅರ್ಹರಿಗೆ ಮಾತ್ರ ಸಿಗುವಂತೆ ಮಾಡುವ ಉದ್ದೇಶದಿಂದ ಯೋಜನೆ ಅನುಷ್ಠಾನದ ಹೊಣೆ ಹೊತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಫಲಾನುಭವಿಗಳ ಪಟ್ಟಿಯನ್ನು ಆಗಿಂದಾಗೆ ಪರಿಷ್ಕರಿಸುತ್ತಾ ಬಂದಿದೆ. ಯೋಜನೆಯ ಸೌಲಭ್ಯ ಪಡೆಯಲು ನಿಗದಿ ಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿರುವ ಫಲಾನುಭವಿಗಳನ್ನು ಪಟ್ಟಿಯಿಂದ ಮುಲಾಜಿಲ್ಲದೆ ವಜಾಗೊಳಿಸುತ್ತಿದೆ.

ಯಜಮಾನರ ಆದಾಯ ಪರಿಗಣನೆ:

ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ರಿಟರ್ನ್ಸ್ ಪಾವತಿದಾರರಾಗಿದ್ದಲ್ಲಿ ಅಂತಹವರು ಯೋಜನೆಗೆ ಅರ್ಹರಾಗಿರುವುದಿಲ್ಲ.

ಸರ್ಕಾರವು ಯೋಜನೆಗೆ ನಿಗದಿಪಡಿಸಿರುವ ಮಾನದಂಡಗಳ ಆಧಾರದ ಮೇಲೆ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ 4,756 ಮಂದಿಯನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಡಲಾಗಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ.

ಯಾರಾರು ಅರ್ಹರು?:

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ ಅನ್ನ ಯೋಜನೆ (ಎಎವೈ), ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಹಾಗೂ ಎಪಿಎಲ್ (ಬಡತನ ರೇಖೆಗಿಂತ ಮೇಲಿರುವ) ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ, ಒಬ್ಬರನ್ನು ಮಾತ್ರ ಯೋಜನೆಗೆ ಪರಿಗಣಿಸಲಾಗುತ್ತದೆ.

ಬಾಕ್ಸ್‌....................

ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾದ ಮಹಿಳೆಯರ ಸಂಖ್ಯೆ

ತಾಲೂಕು ಕೈ ಬಿಡಲಾದವರು

ಚನ್ನಪಟ್ಟಣ1,189

ಕನಕಪುರ1,236

ಮಾಗಡಿ595

ರಾಮನಗರ1,736

ಒಟ್ಟು4,756

ಬಾಕ್ಸ್‌............

ಗೃಹಲಕ್ಷ್ಮಿ ಫಲಾನುಭವಿಗಳ ವಿವರ

ತಾಲೂಕುಫಲಾನುಭವಿಗಳ ಸಂಖ್ಯೆ

ಚನ್ನಪಟ್ಟಣ64,495

ಕನಕಪುರ92,367

ಮಾಗಡಿ53,200

ರಾಮನಗರ67,611

ಒಟ್ಟು2,80,673

ಕೋಟ್ ..................

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಪತಿಯ ಆದಾಯ ಆಧರಿಸಿ ಫಲಾನುಭವಿಗಳ ಆರ್ಥಿಕ ಸ್ಥಿತಿಗತಿ ನಿರ್ಧರಿಸಲಾಗಿದೆ. ಫಲಾನುಭವಿಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅಂತಹವರ ಹೆಸರು ಕೈ ಬಿಡಲಾಗುತ್ತದೆ.

- ಕೆ.ರಾಜು, ಜಿಲ್ಲಾಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಬೆಂ.ದಕ್ಷಿಣ ಜಿಲ್ಲೆ

16ಕೆಆರ್ ಎಂಎನ್ 3,4.ಜೆಪಿಜಿ

3.ಗೃಹಲಕ್ಷ್ಮಿ ಲೋಗೊ

4.ಕೆ.ರಾಜು, ಜಿಲ್ಲಾಧ್ಯಕ್ಷರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಬೆಂ.ದಕ್ಷಿಣ ಜಿಲ್ಲೆ.