ಮಂಡ್ಯ ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಮಶಾನಗಳ ಕೊರತೆ ಎದುರಾಗಿದೆ. ಮರಣಾನಂತರದ ವಿಧಿ-ವಿಧಾನಗಳು ನೆಮ್ಮದಿಯಿಂದ ನೆರವೇರಬೇಕು ಎಂಬ ಉದ್ದೇಶದಿಂದ ಸರ್ಕಾರವು ಅತ್ಯಾಧುನಿಕ ಶೈಲಿಯ ವಿದ್ಯುತ್ ಚಿತಾಗಾರವನ್ನು ತರಲು ನಿರ್ಧರಿಸಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕಲ್ಲಹಳ್ಳಿ ಸ್ಮಶಾನದಲ್ಲಿ ಪೌರಾಡಳಿತ ನಿರ್ದೇಶನಾಲಯ ಮತ್ತು ನಗರಸಭೆ ಸಹಯೋಗದಲ್ಲಿ ಯುಐಡಿಎಫ್ ಮತ್ತು ನಗರಸಭೆ ಅನುದಾನದಲ್ಲಿ 4 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅತ್ಯಾಧುನಿಕ ವಿದ್ಯುತ್ ಚಿತಾಗಾರ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ವಿಶೇಷ ಅನುದಾನದಡಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಕಾರ್ಯಾಚರಣೆ ಆರಂಭಿಸುವ ಗುರಿ ಹೊಂದಲಾಗಿದೆ ಎಂದರು.
ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಮಶಾನಗಳ ಕೊರತೆ ಎದುರಾಗಿದೆ. ಮರಣಾನಂತರದ ವಿಧಿ-ವಿಧಾನಗಳು ನೆಮ್ಮದಿಯಿಂದ ನೆರವೇರಬೇಕು ಎಂಬ ಉದ್ದೇಶದಿಂದ ಸರ್ಕಾರವು ಅತ್ಯಾಧುನಿಕ ಶೈಲಿಯ ವಿದ್ಯುತ್ ಚಿತಾಗಾರವನ್ನು ತರಲು ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದರು.ಇದರ ಜೊತೆಗೆ ಸ್ವರ್ಣಸಂದ್ರ ಮತ್ತು ಚಿಕ್ಕೇಗೌಡನ ದೊಡ್ಡಿ ನಿವಾಸಿಗಳ ಅನುಕೂಲಕ್ಕಾಗಿ ಅಗ್ನಿಶಾಮಕ ಠಾಣೆ ಸಮೀಪ ಒಂದು ಎಕರೆ ಜಾಗ ಗುರುತಿಸಲಾಗಿದ್ದು, ಶೀಘ್ರದಲ್ಲೇ ಅದನ್ನು ಸ್ಮಶಾನಕ್ಕಾಗಿ ಹಸ್ತಾಂತರಿಸಲಾಗುವುದು. ನಗರದ ಎಲ್ಲಾ ಸ್ಮಶಾನಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಅಗತ್ಯ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕಾಮಗಾರಿ ಪೂರ್ಣಗೊಂಡ ಬಳಿಕ ನಗರ ಹಾಗೂ ಸುತ್ತಮುತ್ತಲಿನ ಜನರಿಗೆ ಅನುಕೂಲವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಮಂಜು, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಅಂಬುಜಮ್ಮ, ಪೌರಾಯುಕ್ತೆ ಯು.ಪಿ.ಪಂಪಾಶ್ರೀ, ಮುಖಂಡರಾದ ಕಲ್ಲಹಳ್ಳಿ ಆನಂದ್, ಎಂ.ಕೃಷ್ಣ ಮರ್ಜಿನಿ, ಒಕ್ಕಲಿಗರ ಸಂಘದ ಅಧ್ಯಕ್ಷ ರವೀಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಜೂ.೧೩ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ
ಕನ್ನಡಪ್ರಭ ವಾರ್ತೆ ಮಂಡ್ಯನಂಜಮ್ಮ ಮೋಟೇಗೌಡ ಚಾರಿಟಬಲ್ ಮತ್ತು ಎಜುಕೇಷನಲ್ ಟ್ರಸ್ಟ್ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆಯನ್ನು ಜೂ.೧೩ರಂದು ಸಂಜೆ ೪ ಗಂಟೆಗೆ ನಗರದ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಹೇಳಿದರು.ಬೆಂಗಳೂರು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಅಧ್ಯಕ್ಷತೆ ವಹಿಸುವರು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಲೋಕೇಶ್ ಚಂದಗಾಲು ಅವರ ಎರಡನೇ ಮುದ್ರಣದ ಪರಿಷ್ಕೃತ ನಾಲ್ವಡಿ ನಾಡು ಕೃತಿಯನ್ನು ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಬಿಡುಗಡೆ ಮಾಡುವರು. ಸಾಹಿತಿ ತೈಲೂರು ವೆಂಕಟಕೃಷ್ಣ ಅಭಿನಂದನಾ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಪಾಲ್ಗೊಳ್ಳುವರು.
ಗೋಷ್ಠಿಯಲ್ಲಿ ತಗ್ಗಹಳ್ಳಿ ವೆಂಕಟೇಶ್, ಎಂ.ಸಿ.ಲಂಕೇಶ್, ಚಂದ್ರಶೇಖರ್, ಎಸ್.ಎಂ.ಕೃಷ್ಣಪ್ಪ, ಎಸ್.ಎಂ.ಲೋಕೇಶ್ ಇದ್ದರು.