ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮತ್ತು ಮಾರುತಿ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169 ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಕನ್ನಡಪ್ರಭ ವಾರ್ತೆ ತೀರ್ಥಹಳ್ಳಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಮತ್ತು ಮಾರುತಿ ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169 ಸಮೀಪ ಮಂಗಳವಾರ ರಾತ್ರಿ ನಡೆದಿದೆ.ಉಳಿದಿರುವ ಮೂವರ ಸ್ಥಿತಿ ಗಂಭೀರವಾಗಿದೆ. ಮೃತರು ಶೃಂಗೇರಿ ಸಮೀಪದ ಮೆಣಸೆ ಗ್ರಾಮದವರು. ಚೆನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಊರಿಗೆ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಫಾತಿಮಾ (73), ಮೊಹಮ್ಮದ್ ರೆಹಾನ್ (15), ಮಹಮ್ಮದ್ ಜಯಾನ್ (14), ಮಹಮ್ಮದ್ ರಿಹಾನ್ (8) ಮೃತ ಪಟ್ಟವರು. ಇನ್ನು ಜರೀನಾ ಮತ್ತು 10 ವರ್ಷದ ಬಾಲಕಿಯನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ಚಾಲಕ ರಿಯಾಜ್ ಅಹ್ಮದ್ ಶಿವಮೊಗ್ಗದ ಮೆಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ.