ವಿಶ್ವದಲ್ಲಿ ಪ್ರತಿ ವರ್ಷ ೪೦ ಲಕ್ಷ ಜನ ಮಧುಮೇಹಕ್ಕೆ ಬಲಿ: ಕೆ.ಟಿ.ಹನುಮಂತು

| Published : Nov 15 2024, 12:32 AM IST

ವಿಶ್ವದಲ್ಲಿ ಪ್ರತಿ ವರ್ಷ ೪೦ ಲಕ್ಷ ಜನ ಮಧುಮೇಹಕ್ಕೆ ಬಲಿ: ಕೆ.ಟಿ.ಹನುಮಂತು
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ಪ್ರತಿ ವರ್ಷ ೪೦ ಲಕ್ಷ ಜನರು ಮಧುಮೇಹ ಕಾಯಿಲೆಗೆ ಬಲಿಯಾಗುತ್ತಿದ್ದಾರೆ. ಈ ಕಾಯಿಲೆಗೆ ಸರಿಯಾದ ಪರಿಣಾಮಕಾರಿ ಚಿಕಿತ್ಸೆ ಇಲ್ಲ. ಆದರೆ, ನಮ್ಮ ಜೀವನಶೈಲಿ ಮತ್ತು ಆಹಾರ ಕ್ರಮಗಳಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಂಡು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ಪ್ರತಿ ವರ್ಷ ೪೦ ಲಕ್ಷ ಜನರು ಮಧುಮೇಹ ಕಾಯಿಲೆಗೆ ಬಲಿಯಾಗುತ್ತಿದ್ದಾರೆ. ಈ ಕಾಯಿಲೆಗೆ ಸರಿಯಾದ ಪರಿಣಾಮಕಾರಿ ಚಿಕಿತ್ಸೆ ಇಲ್ಲ. ಆದರೆ, ನಮ್ಮ ಜೀವನಶೈಲಿ ಮತ್ತು ಆಹಾರ ಕ್ರಮಗಳಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಂಡು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆ ಜಿಲ್ಲಾ ರಾಜ್ಯಪಾಲ ಕೆ.ಟಿ.ಹನುಮಂತು ಹೇಳಿದರು.

ನಗರದ ಚಾಮುಂಡೇಶ್ವರಿ ಬಡಾವಣೆಯ ಧನ್ವಂತರಿ ಸಭಾಂಗಣದಲ್ಲಿ ಸಕ್ಕರೆನಾಡು ಅಲಯನ್ಸ್ ಸಂಸ್ಥೆ ಮತ್ತು ಸಮೃದ್ಧಿ ಅಲಯನ್ಸ್ ಸಂಸ್ಥೆ ಆಯೋಜಿಸಿದ್ದ ವಿಶ್ವ ಮಧುಮೇಹ ದಿನಾಚರಣೆ ಮತ್ತು ಉಚಿತ ಆರೋಗ್ಯ ತಪಾಸಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಮಧುಮೇಹ ಸಾಮಾನ್ಯ ಮಕ್ಕಳು, ಮಹಿಳೆಯರು ಮತ್ತು ಪುರುಷರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ದಿನೇ ದಿನೇ ರೋಗ ತೀವ್ರಗೊಳ್ಳುತ್ತಿರುವ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ. ವಿಶ್ವದಲ್ಲಿ ಮಧುಮೇಹಿಗಳು ೨೦೪೫ರ ವೇಳೆಗೆ ಸರಿಸುಮಾರು ೭೮೩ ಮಿಲಿಯನ್ ಆಗಲಿದ್ದಾರೆ. ೪ ಮಂದಿಯಲ್ಲಿ ಒಬ್ಬರಿಗೆ ಮಧುಮೇಹ ಪತ್ತೆಯಾಗಲಿದೆ, ಶೇ.೮೬ರಷ್ಟು ಹೆಚ್ಚಳವಾಗಲಿದೆ ಎಂಬ ವರದಿಯೊಂದು ಹೇಳಿರುವುದಾಗಿ ಆತಂಕ ವ್ಯಕ್ತಪಡಿಸಿದರು.

ಪ್ಲಾಸ್ಟಿಕ್ ಸರ್ಜರಿ ತಜ್ಞೆ ಡಾ.ಸೋನಾಲಿ ಉಚ್ಚಿಲ್, ಪ್ರಪಂಚದಾದ್ಯಅತ ಲಕ್ಷಾಂತರ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಕಳಪೆ ಮತ್ತು ಜಡ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ನಿದ್ರೆಯ ಕೊರತೆ, ಒತ್ತಡ, ಅನುವಂಶಿಕತೆ (ವಂಶವಾಹಿ) ಸೇರಿದಂತೆ ಇತ್ಯಾದಿ ಕಾರಣಗಳಿಂದ ಮಧುಮೇಹ ಕಾಯಿಲೆ ಬಾಧಿಸಬಹುದು ಎಂದು ಸಲಹೆ ನೀಡಿದರು.

ದುಡಿಮೆ ಇಲ್ಲದ ದೇಹದಲ್ಲಿ ಇನ್ಸುಲಿನ್ ಅಸಮತೋಲನದಿಂದ ಮಧುಮೇಹ ಕಾಯಿಲೆ ಬರುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುತ್ತದೆ. ಈ ರೀತಿ ಆದರೆ ಅನೇಕ ರೀತಿಯ ಗಂಭೀರ ರೋಗಗಳ ಅಪಾಯವು ಹೆಚ್ಚುತ್ತದೆ ಎಂದು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ವೈದ್ಯರಿಂದ ಉಚಿತವಾಗಿ ಸಕ್ಕರೆ ಕಾಯಿಲೆ ತಪಾಸಣೆ, ಇಸಿಜಿ, ಬಿಬಿ, ಪಾದಗಳ ತಪಾಸಣೆ ನಡೆಯಿತು.

ಕಾರ್ಯಕ್ರಮದಲ್ಲಿ ಸಕ್ಕರೆ ಖಾಯಿಲೆ ತಜ್ಞ ಡಾ.ಬಾಬು, ಅಲಯನ್ಸ್ ಸಂಸ್ಥೆ ಸಚಿವ ಸಂಪುಟ ಕಾರ್ಯದರ್ಶಿ ಚಂದ್ರಶೇಖರ್, ಮಾಂಡವ್ಯ ಅಲಯನ್ಸ್ ಸಂಸ್ಥೆ ಅಧ್ಯಕ್ಷೆ ಪ್ರೊ.ಶಿವಕುಮಾರ್, ಪ್ರಾಂತೀಯ ಅಧ್ಯಕ್ಷೆ ನೀನಾಪಟೇಲ್, ಲೋಕೇಶ್ ಮತ್ತಿತರರಿದ್ದರು.