ಕನ್ನಡಪ್ರಭ ವಾರ್ತೆ ಹಲಗೂರು

ಕ್ಷೇತ್ರದ ಜನರಿಗೆ ಅಗತ್ಯವಿರುವ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಉತ್ತಮ ಪಡಿಸುವ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಸಮೀಪದ ಅಗಸನಪುರ ಗ್ರಾಮದಲ್ಲಿ 40 ಲಕ್ಷ ರು. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅವಶ್ಯಕವಿರುವ ದುರಸ್ಥಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವರ್ಣಿತಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಮೊಳೆದೊಡ್ಡಿ ಲಿಂಗರಾಜು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಎಂ.ಶಿವಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ಶಶಿರಾಜು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮಾದೇಶ, ಮುಖಂಡರಾದ ಪ್ರಸಾದ್, ನಾಗಮಹದೇವು, ಚೆಸ್ಕಾಂ ಎಇಇ ಪ್ರೇಮ್ ಕುಮಾರ್, ಸೋಮಶೇಖರ್ ಸೇರಿದಂತೆ ಹಲವರು ಇದ್ದರು.ಚಿಕ್ಕಮಂಡ್ಯದಲ್ಲಿ ಹೆಲಿ ಟೂರಿಸಂಗೆ ಸ್ಥಳ ಪರಿಶೀಲನೆ

ಕನ್ನಡಪ್ರಭ ವಾರ್ತೆ ಮಂಡ್ಯ


ಬೂದನೂರು ಉತ್ಸವದ ಪ್ರಯುಕ್ತ ನಡೆಸಲು ಉದ್ದೇಶಿಸಿರುವ ಹೆಲಿ ಟೂರಿಸಂ ಸಂಬಂಧ ಚಿಕ್ಕ ಮಂಡ್ಯದಲ್ಲಿ ಗುರುತಿಸಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆ ಸಂದರ್ಭದಲ್ಲಿ ಹೆಲಿಪ್ಯಾಡ್ ವ್ಯವಸ್ಥೆಗೆ ಅಗತ್ಯವಿರುವ ಸ್ಥಳದ ಲಭ್ಯತೆ ಹಾಗೂ ಸುರಕ್ಷತಾ ಮಾನದಂಡಗಳ ಪಾಲನೆ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ವಾಹನ ನಿಲುಗಡೆ ವ್ಯವಸ್ಥೆ, ಸಂಚಾರ ನಿರ್ವಹಣೆ, ತುರ್ತು ವೈದ್ಯಕೀಯ ಸೇವೆಗಳ ಸಿದ್ಧತೆ ಹಾಗೂ ಅಗ್ನಿಶಾಮಕ ವ್ಯವಸ್ಥೆಗಳ ಸೌಲಭ್ಯ ಕುರಿತು ಸಮಗ್ರವಾಗಿ ಪರಿಶೀಲಿಸಿದರು.

ಸರ್ಕಾರದ ಮಾರ್ಗಸೂಚಿ ಹಾಗೂ ಸಂಬಂಧಿತ ಇಲಾಖೆಗಳ ನಿಯಮಾನುಸಾರ ಅಗತ್ಯ ಅನುಮತಿಗಳನ್ನು ಪಡೆದು ಮುಂದಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.