ರಾಷ್ಟ್ರೀಯ, ರಾಜ್ಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. 199 ಐಪಿಸಿ, 97 ಚೆಕ್ ಬೌನ್ಸ್ ಪ್ರಕರಣ, 36 ಅಪಘಾತ ಮತ್ತು 69 ಸಿವಿಲ್ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿದ ನ್ಯಾಯಾಧೀಶರು, ಕಕ್ಷಿದಾರರಿಗೆ 11,61,40,601 ರು. ಪರಿಹಾರಕ್ಕೆ ಆದೇಶ ಹೊರಡಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣದ ಜೆಎಂಎಫ್‌ಸಿ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ ಒಟ್ಟು 401 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ ನ್ಯಾಯಾಧೀಶರು 11.61 ಲಕ್ಷ ರು. ಪರಿಹಾರಕ್ಕೆ ಆದೇಶ ನೀಡಿದರು.

ರಾಷ್ಟ್ರೀಯ, ರಾಜ್ಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. 199 ಐಪಿಸಿ, 97 ಚೆಕ್ ಬೌನ್ಸ್ ಪ್ರಕರಣ, 36 ಅಪಘಾತ ಮತ್ತು 69 ಸಿವಿಲ್ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿದ ನ್ಯಾಯಾಧೀಶರು, ಕಕ್ಷಿದಾರರಿಗೆ 11,61,40,601 ರು. ಪರಿಹಾರಕ್ಕೆ ಆದೇಶ ಹೊರಡಿಸಿದರು. ಪ್ರಧಾನಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 18, ಒಂದನೇ ಅಪರ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 46, ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ 161, ಒಂದನೇ ಅಪರ ಸಿವಿಲ್ ನ್ಯಾಯಾಲಯದಲ್ಲಿ 41, ಎರಡನೇ ಅಪರ ನ್ಯಾಯಾಲಯದಲ್ಲಿ 65, ಮೂರನೇ ಅಪರ ನ್ಯಾಯಾಲಯದಲ್ಲಿ 65 ಹಾಗೂ ನಾಲ್ಕನೇ ಸಿವಿಲ್ ನ್ಯಾಯಾಲಯದಲ್ಲಿ 5 ಪ್ರಕರಣಗಳು ಸೇರಿದಂತೆ ಒಟ್ಟು 401 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ನ್ಯಾಯಾಧೀಶರಾದ ಎನ್‌.ಬಿ .ಮೋಹನ್ ಕುಮಾರಿ, ಎಸ್. ಸಿ .ನಳಿನ, ಸಿ.ಎಂ .ಪಾರ್ವತಿ, ಕೆ. ಗೋಪಾಲಕೃಷ್ಣ, ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಮ್ ಡೇವಿಡ್, ಕಪನಿ ನಂಜೇಶ್ವರ, ವಕೀಲರ ಸಂಘದ ಅಧ್ಯಕ್ಷ ಎಂ. ಎನ್ .ಶಿವಣ್ಣ, ಪ್ರಧಾನ ಕಾರ್ಯದರ್ಶಿ ಎಂ .ಜೆ .ಸುಮಂತ್ ವಕೀಲರಾದ ಎಚ್. ಬಿ.ಬಾಲರಾಜು, ಚೈತ್ರ, ಚೆನ್ನಮ್ಮ ಸೇರಿ ವಕೀಲರ ಸಂಘದ ಪದಾಧಿಕಾರಿಗಳು ಅದಾಲತ್ ನಲ್ಲಿ ಭಾಗವಹಿಸಿದ್ದರು.