ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಶಿರಾ ಕ್ಷೇತ್ರದ ಗಂಗಾ ಕಲ್ಯಾಣ ಯೋಜನೆಯಡಿ ೨೦೧೮-೧೯ನೇ ಸಾಲಿನಿಂದ ೨೦೨೨-೨೩ನೇ ಸಾಲಿನವರೆಗೆ ಡಿ.ಬಿ.ಟಿ. ಮಾದರಿಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಟಿ.ಬಿ.ಜಯಚಂದ್ರ ಪಂಪ್ ಸೆಟ್ ಮತ್ತು ಪೂರಕ ಸಾಮಗ್ರಿಗಳನ್ನು ವಿತರಿಸಿದರು.
ಕನ್ನಡಪ್ರಭ ವಾರ್ತೆ ಶಿರಾ ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಶಿರಾ ಕ್ಷೇತ್ರದ ಗಂಗಾ ಕಲ್ಯಾಣ ಯೋಜನೆಯಡಿ ೨೦೧೮-೧೯ನೇ ಸಾಲಿನಿಂದ ೨೦೨೨-೨೩ನೇ ಸಾಲಿನವರೆಗೆ ಡಿ.ಬಿ.ಟಿ. ಮಾದರಿಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಟಿ.ಬಿ.ಜಯಚಂದ್ರ ಪಂಪ್ ಸೆಟ್ ಮತ್ತು ಪೂರಕ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ೪೩೪೦೦ ಕೋಟಿ ರುಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಬಿವೃದ್ಧಿಗೆ ಈ ಬಾರಿಯ ಬಜೆಟ್ನಲ್ಲಿ ಮೀಸಲಿಡಲಾಗಿದೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಅವರಿಗೆ ಆರ್ಥಿಕವಾಗಿ ಶಕ್ತಿ ತುಂಬಲು ಅನುಕೂಲವಾಗುತ್ತದೆ. ಇಂದು ೧೨೦ ರೈತರು ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾಗಿ ಸರಕಾರದ ಸವಲತ್ತು ಪಡೆದಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಆರ್ಥಿಕವಾಗಿ ಸಬಲರಾದರೆ ಸಮಾನತೆ ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ಮಹರ್ಷಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಭಾಗೀರತಿ, ತಾಲೂಕು ಅಭಿವೃದ್ಧಿ ಅಧಿಕಾರಿ ಗಂಗರಾಜು, ಶಿರಾ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಣಿಕಂಠ ಸೇರಿದಂತೆ ಹಲವರು ಹಾಜರಿದ್ದರು.