444 ವಿವಿಧ ಆರೋಗ್ಯ ಅಧಿಕಾರಿ, ಸಿಬ್ಬಂದಿ ನೇಮಕಕ್ಕೆ ಸಂದರ್ಶನ: ಪಾಲಿಕೆ

| Published : Feb 12 2024, 01:33 AM IST

444 ವಿವಿಧ ಆರೋಗ್ಯ ಅಧಿಕಾರಿ, ಸಿಬ್ಬಂದಿ ನೇಮಕಕ್ಕೆ ಸಂದರ್ಶನ: ಪಾಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಎನ್‌ಯುಎಚ್‌ಎಂ, ಆರ್‌ಸಿಎಚ್‌ ಸೇರಿದಂತೆ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 444 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆ.13, 14 ಮತ್ತು 15 ರಂದು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನೇಮಕಾತಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಎನ್‌ಯುಎಚ್‌ಎಂ, ಆರ್‌ಸಿಎಚ್‌ ಸೇರಿದಂತೆ ವಿವಿಧ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 444 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೆ.13, 14 ಮತ್ತು 15 ರಂದು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನೇಮಕಾತಿ ನಡೆಯಲಿದೆ.

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ (ಎನ್‌ಯುಎಚ್ಎಂ), ಆರ್‌ಸಿಎಚ್‌, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ (ಎನ್‌ಟಿಇಪಿ), ರಾಷ್ಟ್ರೀಯ ಮಾನಸಿಕ ಆರೋ ಗ್ಯ ಕಾರ್ಯಕ್ರಮ ತಂಬಾಕು ನಿಯಂತ್ರಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ಅಂಧತ್ವ ನಿರ್ಮೂಲನಾ ಕಾರ್ಯಕ್ರಮದಡಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಮೆರಿಟ್ ಕಂ ರೋಸ್ಟರ್ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಆಧರಿಸಿ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.ಯಾವ ಹುದ್ದೆಗಳಿಗೆ ನೇಮಕ?

ಬಯೋ ಮೆಡಿಕಲ್‌ ಎಂಜಿನಿಯರ್‌ ಒಂದು ಹುದ್ದೆ, ವಲಯ ಕಾರ್ಯಕ್ರಮ ವ್ಯವಸ್ಥಾಪಕ ಎರಡು ಹುದ್ದೆ, ಸಾಂಕ್ರಾಮಿಕ ಶಾಸ್ತ್ರಜ್ಞ ಒಂದು ಹುದ್ದೆ, 154 ಪಿಎಚ್‌ಸಿಒ, 115 ಎಚ್‌ಐಒ, 40 ಸ್ಟಾಫ್‌ ನರ್ಸ್, 48 ಫಾರ್ಮಾಸಿಸ್ಟ್, 5 ಲ್ಯಾಬ್‌ ತಂತ್ರಜ್ಞ, 4 ಒಬಿಜಿ, ನೇತ್ರ ತಜ್ಞರು, ಮಕ್ಕಳ ತಜ್ಞರು ಹೀಗೆ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.