ಸಾರಾಂಶ
ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆಗೆ 20,763 ವಿದ್ಯಾರ್ಥಿಗಳ ಪೈಕಿ 20,297 ವಿದ್ಯಾರ್ಥಿಗಳು ಹಾಜರಾಗಿದ್ದು, 466 ಪರೀಕ್ಷಾರ್ಥಿಗಳು ಗೈರು ಹಾಜರಾಗಿದ್ದಾರೆ.
ಪಾಲಕರು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ತಮ್ಮ ಮಕ್ಕಳನ್ನು ಬಿಟ್ಟು ಹೋದರು. ಮಕ್ಕಳು ಉತ್ತಮವಾಗಿ ಪರೀಕ್ಷೆ ಬರೆಯಲಿ ಎಂದು ಶುಭ ಹಾರೈಸಿದರು. ಬಿಸಿಲು ಜಾಸ್ತಿ ಇದ್ದುದ್ದರಿಂದ ಪರೀಕ್ಷಾ ಕೇಂದ್ರಗಳಲ್ಲಿ ನೀರಿನ ವ್ಯವಸ್ಥೆಯೂ ಮಾಡಲಾಗಿತ್ತು.
ಜಿಲ್ಲೆಯ 71 ಪರೀಕ್ಷಾ ಕೇಂದ್ರಗಳಲ್ಲಿ 20297 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 3022, ಹೊಸಪೇಟೆಯಲ್ಲಿ 5673, ಹೂವಿನಹಡಗಲಿ 2766, ಕೂಡ್ಲಿಗಿ 4812 ಮತ್ತು ಹರಪನಹಳ್ಳಿಯಲ್ಲಿ 4024 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ 466 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಕೆಲ ಕಡೆ ಕಬ್ಬು ಕಟಾವು ಮಾಡುವ ಸ್ಥಳದಿಂದ ಪರೀಕ್ಷೆ ಬರೆಯಲು ಬಂದಿದ್ದ ಮಕ್ಕಳಿಗೆ ಪರೀಕ್ಷಾ ಪತ್ರ ನಿರಾಕರಿಸಲಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ.
ಹೊಸಮಲಪನಗುಡಿಯ ವಿಜಯ ವಿದ್ಯಾರಣ್ಯ ಪ್ರೌಢಶಾಲೆ ಗೌತಮ್ ಎಂಬ ವಿದ್ಯಾರ್ಥಿಗೆ ಶಾಲೆ ಮುಖ್ಯಶಿಕ್ಷಕಿ ಸರ್ವಮಂಗಳಾ ಪರೀಕ್ಷಾ ಪತ್ರ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಮಲಾಪುರದ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಿಂದ ಬಾಲಕನನ್ನು ಮರಳಿ ಕಳುಹಿಸಲಾಗಿದೆ. ತಮ್ಮ ಮಗನ ಭವಿಷ್ಯಕ್ಕೆ ಶಾಲೆ ಮುಖ್ಯಶಿಕ್ಷಕಿ ಕೊಡಲಿಪೆಟ್ಟು ನೀಡಿದ್ದಾರೆ ಎಂದು ಪಾಲಕರು ದೂರಿದ್ದಾರೆ. ಈ ರೀತಿ ಪ್ರಕರಣಗಳು ಕೆಲ ಕಡೆ ಕೇಳಿ ಬಂದಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿತ್ತು. ಕುಡಿಯುವ ನೀರು, ಶೌಚಾಲಯ, ಬೆಳಕು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ವೆಬ್ ಕಾಸ್ಟಿಂಗ್‌ಗೆ ವ್ಯವಸ್ಥೆ ಕೂಡ ಮಾಡಲಾಗಿತ್ತು. ಸಿಸಿ ಕ್ಯಾಮೆರಾ ಕಣ್ಗಾವಲ್ಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಏ.4ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))