ಸಾರಾಂಶ
47 ಸಾವಿರ ಜನರು ಭಾಗಿ
ಕನ್ನಡಪ್ರಭ ವಾರ್ತೆ ಶಿರಾ
ತಾಲೂಕಿನ ಉಜ್ಜನಕುಂಟೆ ಬಳಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಸ್ಥಳೀಯ ಶಾಸಕ ಟಿ.ಬಿ.ಜಯಚಂದ್ರ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಮಹದೇವಪ್ಪ ನೇತೃತ್ವದಲ್ಲಿ, ಸಂವಿಧಾನದ ಅರಿವು ಮೂಡಿಸಲು, ಸಂವಿಧಾನದ ಆಶಯಗಳನ್ನ ಜನಸಮುದಾಯಕ್ಕೆ ತಲುಪಿಸಲು, ಕಳೆದ ಒಂದು ವರ್ಷದಿಂದ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದೇವೆ. ಅಂತಾರಾಷ್ಟ್ರೀಯ ಮಟ್ಟದ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ವಿಶ್ವಸಂಸ್ಥೆ ಕರೆಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಅದ್ಧೂರಿ ಕಾರ್ಯಕ್ರಮವನ್ನು ರೂಪಿಸಿದೆ. ಶಿರಾ ತಾಲೂಕಿನಲ್ಲಿ 47 ಸಾವಿರ ಜನರಿಂದ, ಎಲ್ಲಾ ಇಲಾಖೆಯ ಅಧಿಕಾರಿಗಳು, ನೌಕರರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಿರುವುದು. ಪ್ರಜಾಪ್ರಭುತ್ವ ಉಳಿಗೆ ತಂದಂತಹ ಯಶಸ್ಸು ಇದಾಗಿದ್ದು. ಇಂದು ಹಬ್ಬದ ರೀತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.