ಪ್ರತಿಷ್ಠಿತ ಶಾಲೆಗಳಿಗೆ 49 ವಿದ್ಯಾರ್ಥಿಗಳು ಆಯ್ಕೆ: ಎಡಿಸಿ

| Published : Jun 09 2024, 01:42 AM IST

ಪ್ರತಿಷ್ಠಿತ ಶಾಲೆಗಳಿಗೆ 49 ವಿದ್ಯಾರ್ಥಿಗಳು ಆಯ್ಕೆ: ಎಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಹತಾ ಪರೀಕ್ಷೆ ಮೂಲಕ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 49 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಬೀರಸಂದ್ರ ಗ್ರಾಮದ ಬೆಂ.ಗ್ರಾ. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ನಡೆದ ಪ್ರತಿಷ್ಠಿತ ಶಾಲೆಗೆ ಆಯ್ಕೆಯಾಗಿರುವ ಪ್ರತಿಭಾವಂತ ಮಕ್ಕಳು ಹಾಗೂ ಅವರ ಪೋಷಕರೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಕಲ್ಪಿಸಲು ಶೇ.60ಕ್ಕಿಂತ ಹೆಚ್ಚಿನ ಅಂಕ ಗಳಿಸಿ 5ನೇ ತರಗತಿ ಉತ್ತೀರ್ಣರಾದ ಮಕ್ಕಳನ್ನು ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡದ 19 ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿಯ 30 ವಿದ್ಯಾರ್ಥಿಗಳು ಸೇರಿ ಒಟ್ಟು 49 ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಶಾಲಾ ಪಾಠಗಳನ್ನು ನಿರಂತರವಾಗಿ ಅಭ್ಯಾಸ ಮಾಡಿ ಉನ್ನತ ಸ್ಥಾನಗಳನ್ನು ತಲುಪಬೇಕು ಎಂದು ಹೇಳಿದರು‌.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ ಅಧೀಕ್ಷಕರಾದ ಗಾಯಿತ್ರಿ ಸೇರಿದಂತೆ ಪ್ರತಿಷ್ಠಿತ ಶಾಲೆಗೆ ಆಯ್ಕೆಯಾದ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

6ಕೆಡಿಬಿಪಿ3-

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಹತಾ ಪರೀಕ್ಷೆ ಮೂಲಕ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ನಡೆಯಿತು.