ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಪ್ರಜಾಸೌಧ ಕಟ್ಟಡದ ಎರಡನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲು 5 ಕೋಟಿ ಹೆಚ್ಚುವರಿ ಅನುದಾನ ಒದಗಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಐಟಿ ಮತ್ತು ಬಿಟಿ ಹಾಗೂ ಇ-ಆಡಳಿತ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಕಲಬುರಗಿಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ ತಾಲ್ಲೂಕು ಪ್ರಜಾಸೌಧ ಕಟ್ಟಡದ ಎರಡನೇ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲು ₹5 ಕೋಟಿ ಹೆಚ್ಚುವರಿ ಅನುದಾನ ಒದಗಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಐಟಿ ಮತ್ತು ಬಿಟಿ ಹಾಗೂ ಇ-ಆಡಳಿತ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಅಫಜಲಪುರ ತಾಲ್ಲೂಕಿನಲ್ಲಿ ಜನರಿಗೆ ವಿವಿಧ ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ತಾಲ್ಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. 2022ರ ಜನವರಿ 25ರಂದು ಸರ್ಕಾರವು ಈ ಕಟ್ಟಡ ನಿರ್ಮಾಣಕ್ಕೆ ₹10 ಕೋಟಿ ಅಂದಾಜು ವೆಚ್ಚದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿತ್ತು.ಪ್ರಸ್ತುತ ಕಟ್ಟಡದ ಕೆಲಸ ಪ್ರಗತಿಯಲ್ಲಿದ್ದು, ಅನುದಾನದ ಕೊರತೆಯಿಂದಾಗಿ ಆರಂಭದಲ್ಲಿ ಅನುಮೋದಿತ ಯೋಜನೆಯಡಿ ಈ ಮೂರು ಹಂತಗಳ ಕಾಮಗಾರಿಗಳನ್ನು ಮಾತ್ರ ಗುತ್ತಿಗೆದಾರರಿಗೆ ವಹಿಸಲಾಗಿತ್ತು. ಕಟ್ಟಡದ ಎರಡನೇ ಮತ್ತು ಮೂರನೇ ಮಹಡಿಗಳ ನಿರ್ಮಾಣವನ್ನು ಪೂರ್ಣಗೊಳಿಸಲು ಹೆಚ್ಚುವರಿ ಅನುದಾನದ ಅಗತ್ಯವಿರುವ ಹಿನ್ನೆಲೆಯಲ್ಲಿ, ₹5 ಕೋಟಿ ಹೆಚ್ಚುವರಿ ಅನುದಾನಕ್ಕೆ ಸರ್ಕಾರ ಸಮ್ಮತಿಸಿದೆ, ಈಗಾಗಲೇ ಮಂಜೂರಾಗಿರುವ ₹10 ಕೋಟಿ ಹಾಗೂ ಎರಡನೇ ಹಂತದ ಕಾಮಗಾರಿಗೆ ಒದಗಿಸಲಾಗುವ ₹5 ಕೋಟಿ ಸೇರಿದಂತೆ ಕಟ್ಟಡದ ಒಟ್ಟು ಅಂದಾಜು ವೆಚ್ಚ ₹15 ಕೋಟಿಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ತಾಲ್ಲೂಕು ಮಟ್ಟದಲ್ಲಿ ಸರ್ಕಾರಿ ಕಚೇರಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸುವುದರಿಂದ ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಪಡೆಯಲು ಅನುಕೂಲವಾಗಲಿದೆ. ಗ್ರಾಮೀಣ ಭಾಗದ ಜನರು ಸರ್ಕಾರಿ ಕೆಲಸಗಳಿಗಾಗಿ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವುದರ ಜೊತೆಗೆ ಆಡಳಿತಾತ್ಮಕ ಕಾರ್ಯಕ್ಷಮತೆಯೂ ಹೆಚ್ಚಲಿದೆ.ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ. ತಾಲ್ಲೂಕು ಮಟ್ಟದಲ್ಲಿ ಉತ್ತಮ ಆಡಳಿತಾತ್ಮಕ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಜನರಿಗೆ ಸರ್ಕಾರಿ ಸೇವೆಗಳನ್ನು ಜನಸ್ನೇಹಿಯಾಗಿ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.