ಆವಲಹಳ್ಳಿ, ವಿ.ವಿ.ಪುರ, ಇಂದಿರಾನಗರ ಹಾಗೂ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಹೊರ ರಾಜ್ಯದ ಮೂವರು ಸೇರಿ ಒಟ್ಟು ಐವರು ಆರೋಪಿಗಳನ್ನು ಬಂಧಿಸಿ ₹8 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು : ಆವಲಹಳ್ಳಿ, ವಿ.ವಿ.ಪುರ, ಇಂದಿರಾನಗರ ಹಾಗೂ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಹೊರ ರಾಜ್ಯದ ಮೂವರು ಸೇರಿ ಒಟ್ಟು ಐವರು ಆರೋಪಿಗಳನ್ನು ಬಂಧಿಸಿ ₹8 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಎಂಡಿಎಂಎ, ಮೊಬೈಲ್ ಫೋನ್, ದ್ವಿಚಕ್ರ ವಾಹನವನ್ನು ಜಪ್ತಿ
ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳಾದ 4.8 ಕೆ.ಜಿ ಗಾಂಜಾ, 15 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆವಲಹಳ್ಳಿ, ವಿ.ವಿ.ಪುರ, ಇಂದಿರಾನಗರ ಹಾಗೂ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದಾಗಿ ಭಾತ್ಮೀದಾರರಿಂದ ಬಂಧ ಖಚಿತ ಮಾಹಿತಿಯನ್ನು ಆಧರಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಂಡು, ಆರೋಪಿಗಳಿಗೆ ಸೇರಿದ್ದ ಸ್ಥಳಗಳ ಮೇಲೆ ದಾಳಿ ನಡೆಸಿ, ಹೊರ ರಾಜ್ಯದ ಮೂವರು ಹಾಗೂ ಇಬ್ಬರು ಸ್ಥಳೀಯ ವ್ಯಕ್ತಿಗಳೂ ಸೇರಿ ಒಟ್ಟು ಐದು ಮಂದಿಯನ್ನು ಮಾದಕ ವಸ್ತು ಸಮೇತ ಬಂಧಿಸಲಾಯಿತು.
ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಖರೀದಿ
ನಂತರ ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾಗ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಹೊರ ರಾಜ್ಯದ ಹಾಗೂ ರಾಜ್ಯದಲ್ಲಿನ ಅಪರಿಚಿತ ವ್ಯಕ್ತಿಗಳಿಂದ ಮಾದಕ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಿಕೊಂಡು ಬಂದು ಸಾರ್ವಜನಿಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
