ಸಾರಾಂಶ
ಶಕ್ತಿ ಯೋಜನೆ ಕುರಿತು ಕೆಎಸ್‌ಆರ್‌ಟಿಸಿ ಡಿಪೋ ಲೆಕ್ಕ ಮೇಲ್ವಿಚಾರಕ ಸಮಂತ್‌ಕುಮಾರ್, ಗೃಹಲಕ್ಷ್ಮಿ ಯೋಜನೆ ಕುರಿತು ಸಿಡಿಪಿಒ ಕೃಷ್ಣಮೂರ್ತಿ, ಯುವನಿಧಿ ಕುರಿತು ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿ ಕುಸುಮ, ಅನ್ನಭಾಗ್ಯ ಯೋಜನೆ ಕುರಿತು ಆಹಾರ ನಿರೀಕ್ಷಕ ಅನಿಲ್ ಕುಮಾರ್, ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಅಧಿಕಾರಿ ಸತೀಶ್ ಗೃಹ ಜ್ಯೋತಿ ಯೋಜನೆ ಕುರಿತು ಮಾಹಿತಿ.
ಕನ್ನಡಪ್ರಭ ವಾರ್ತೆ ನಾಗಮಂಗಲ
ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳು ತಾಲೂಕಿನ ಬಹುತೇಕ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿರುವುದು ಶ್ಲಾಘನೀಯ. ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೂ ತಲುಪಿಸಲು ಕ್ರಮವಹಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಎರಡು ವರ್ಷ ಯಶಸ್ವಿಯಾಗಿ ಪೂರೈಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳಿಂದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳ ಕುರಿತು ತಾಲೂಕಿನ ಜನರಿಗೆ ಮಾಹಿತಿ ನೀಡುವ ಜೊತೆಗೆ ಕುಂದು ಕೊರತೆಗಳಿದ್ದಲ್ಲಿ ಆಲಿಸಿ ಸಮಸ್ಯೆ ಬಗೆಹರಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಸಭೆ ನಡೆಸಲಾಗುವುದು ಎಂದರು.ಶಕ್ತಿ ಯೋಜನೆ ಕುರಿತು ಕೆಎಸ್‌ಆರ್‌ಟಿಸಿ ಡಿಪೋ ಲೆಕ್ಕ ಮೇಲ್ವಿಚಾರಕ ಸಮಂತ್‌ಕುಮಾರ್, ಗೃಹಲಕ್ಷ್ಮಿ ಯೋಜನೆ ಕುರಿತು ಸಿಡಿಪಿಒ ಕೃಷ್ಣಮೂರ್ತಿ, ಯುವನಿಧಿ ಕುರಿತು ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿ ಕುಸುಮ, ಅನ್ನಭಾಗ್ಯ ಯೋಜನೆ ಕುರಿತು ಆಹಾರ ನಿರೀಕ್ಷಕ ಅನಿಲ್ ಕುಮಾರ್, ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಅಧಿಕಾರಿ ಸತೀಶ್ ಗೃಹ ಜ್ಯೋತಿ ಯೋಜನೆ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ದಿನೇಶ್, ಶರತ್‌ರಾಮಣ್ಣ, ರವಿಕಾಂತೇಗೌಡ, ವಿನಯ್‌ಗೌಡ, ನೀಲಾಮೂರ್ತಿ, ಪಿ.ಗೀತಾ, ಶ್ರೀಧರ್, ತಮ್ಮಣ್ಣಗೌಡ, ತಾಪಂ ಅಧಿಕಾರಿಳಾದ ಸಂದೀಪ್, ರವಿ, ಭಾಗ್ಯಮ್ಮ ಸೇರಿದಂತೆ ಹಲವರು ಇದ್ದರು.