ಸಾರಾಂಶ
ಉಪ ವಿಭಾಗಾಧಿಕಾರಿ ರಶ್ಮಿ ಅಧ್ಯಕ್ಷತೆಯಲ್ಲಿ ನಡೆದ ಉಪ ವಿಭಾಗ ಮಟ್ಟದ ಗ್ಯಾರಂಟಿ ಪ್ರಾಧಿಕಾರದ ಸಭೆ
ಕನ್ನಡಪ್ರಭ ವಾರ್ತೆ. ಚಿಕ್ಕಮಗಳೂರುರಾಜ್ಯ ಸರ್ಕಾರ ತನ್ನ ಮಾತಿನಂತೆ ಅನ್ನ ಭಾಗ್ಯ ಯೋಜನೆಯಡಿ ಫೆಬ್ರವರಿ ಮತ್ತು ಮಾರ್ಚ್‌ನಿಂದ ಹಣದ ಬದಲಾಗಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಮುಂದಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವನಾಂದಸ್ವಾಮಿ ಹೇಳಿದರು.ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ತಾಂತ್ರಿಕ ಕಾರಣದಿಂದ ಒಂದು ವರ್ಷದಿಂದ 5 ಕೆಜಿ ಅಕ್ಕಿ ಬದಲು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುತ್ತಿತ್ತು. ಆದರೆ, ಕಳೆದ 2 ತಿಂಗಳಿಂದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಒಡಂಬಡಿಕೆಯಲ್ಲಿ ಅಕ್ಕಿ ದಾಸ್ತಾನು ಸಿಗುತ್ತಿರುವ ಕಾರಣದಿಂದ ಫೆಬ್ರವರಿ ತಿಂಗಳಿಂದ ರಾಜ್ಯಾದ್ಯಂತ ಹಣದ ಬದಲು ಅಕ್ಕಿ ನೀಡಲು ಮುಂದಾಗಿದ್ದು ನಮ್ಮ ಜಿಲ್ಲೆಯಲ್ಲಿ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 2,40,000 ಬಿಪಿಎಲ್ ಕಾರ್ಡುಗಳಿದ್ದು, ಈ ಕಾರ್ಡ್‌ಗಳಲ್ಲಿನ ಒಟ್ಟು ಫಲಾನುಭವಿಗಳು 7,74,418 ಬಿಪಿಎಲ್ ಕಾರ್ಡ್ ಫಲಾನುಭವಿಗಳು ಹಾಗೂ ಅಂತ್ಯೋದಯ 68,349 ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಉಳಿದ ಪಡಿತರರಿಗೆ ₹175 ಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಫೆಬ್ರವರಿ ಮತ್ತು ಮಾರ್ಚ್ ಮಾಹೆ ಹಣದ ಬದಲು ಪ್ರತಿ ಒಬ್ಬರಿಗೆ 15 ಕೆಜಿ ಅಕ್ಕಿ ಕೊಡಲಾಗುತ್ತದೆ ಎಂದರು.ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸರಬರಾಜು ಮತ್ತು ದಾಸ್ತಾನು ಕೊರತೆ ಕಂಡು ಬಂದಿಲ್ಲ, ನ್ಯಾಯ ಬೆಲೆ ಅಂಗಡಿಯವರು ಇಂತಹ ಕಾರಣ ನೀಡಿದರೆ ಜನರು ನಂಬಬಾರದು ಎಂದು ಹೇಳಿದರು. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪಡೆದ ಫಲಾನುಭವಿಗಳು ಅಕ್ಕಿಯನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವಂತಿಲ್ಲ, ಇಂತಹ ಘಟನೆಗಳು ಕಂಡುಬಂದಲ್ಲಿ ಅಂತವರ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಶ್ಮಿ ಹಾಗೂ ಗ್ಯಾರಂಟಿ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಮಲ್ಲೇಶ್‌ಸ್ವಾಮಿ, ಜೇಮ್ಸ್ ಉಪಸ್ಥಿತರಿದ್ದರು.
---- ಬಾಕ್ಸ್ ---ಪಡಿತರ ವಿತರಣೆಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಎನ್ ಎಫ್‌ಎಸ್‌ಎ ಯೋಜನೆಯಡಿ ಉಚಿತವಾಗಿ ವಿತರಿಸಲಾಗುವ ಆಹಾರಧಾನ್ಯದ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ಬಾಬ್ತು ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಫೆಬ್ರವರಿ ಮಾಹೆಯಿಂದ ಅನ್ವಯವಾಗುವಂತೆ ವಿತರಿಸಲು ಸರ್ಕಾರ ಆದೇಶಿಸಿದೆ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.20 ಕೆಸಿಕೆಎಂ 1ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಉಪ ವಿಭಾಗಾಧಿಕಾರಿ ರಶ್ಮಿ ಅಧ್ಯಕ್ಷತೆಯಲ್ಲಿ ಉಪ ವಿಭಾಗ ಮಟ್ಟದ ಗ್ಯಾರಂಟಿ ಪ್ರಾಧಿಕಾರದ ಸಭೆ ನಡೆಯಿತು. ಎಂ.ಸಿ. ಶಿವಾನಂದಸ್ವಾಮಿ, ಜೇಮ್ಸ್, ಮಲ್ಲೇಶ್‌ಸ್ವಾಮಿ ಇದ್ದರು.