ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕನಿಗೆ ₹5 ಲಕ್ಷ

| Published : Aug 11 2025, 12:33 AM IST

ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕನಿಗೆ ₹5 ಲಕ್ಷ
Share this Article
  • FB
  • TW
  • Linkdin
  • Email

ಸಾರಾಂಶ

ಮಸೀದಿಯ ಮುಂದೆಯೇ ಗವಿಸಿದ್ದಪ್ಪನ ಕೊಲೆಯಾಗಿದೆ. ಈ ಸಂದರ್ಭದಲ್ಲಿ ಆ ಯುವಕನ ಕೊಲೆ ತಡೆಯುವ ಕೆಲಸ ಮುಸ್ಲಿಮರು ಯಾಕೆ ಮಾಡಲಿಲ್ಲ

ಕೊಪ್ಪಳ: ಹಿಂದೂ ಯುವಕ ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹ 5 ಲಕ್ಷ ಕೊಡಲಾಗುವುದು ಎಂಬ ಅಭಿಯಾನ ಆರಂಭಿಸಲಾಗುವುದು ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದರು.

ಇತ್ತೀಚೆಗೆ ಮುಸ್ಲಿಂ ಮಹಿಳೆಯನ್ನು ಪ್ರೀತಿಸಿದ್ದಕ್ಕೆ ಕೊಲೆಯಾಗಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಅವರು, ಮಸೀದಿಯ ಮುಂದೆಯೇ ಗವಿಸಿದ್ದಪ್ಪನ ಕೊಲೆಯಾಗಿದೆ. ಈ ಸಂದರ್ಭದಲ್ಲಿ ಆ ಯುವಕನ ಕೊಲೆ ತಡೆಯುವ ಕೆಲಸ ಮುಸ್ಲಿಮರು ಯಾಕೆ ಮಾಡಲಿಲ್ಲ? ರಿಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ. ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ? ಅವರನ್ನು ಮದುವೆ ಆಗಬಾರದೆಂದು ಏಲ್ಲಿದೆ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ಕೊಡುವ ಅಭಿಯಾನ ಆರಂಭಿಸಲಿದ್ದೇವೆ ಎಂದರು.

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅಧಿವೇಶನಲ್ಲಿ ನಾವು ತರಾಟೆ ತೆಗೆದುಕೊಳ್ಳಲಿದ್ದೇವೆ. ಈ ಕೊಲೆಗೆ ಸರ್ಕಾರವೇ ಸಾಥ್ ನೀಡಿದೆ. ಕೊಲೆ ಮಾಡಿದ ಯುವಕ ಕೊಲೆಗೂ ಮುನ್ನ ಕೈಯಲ್ಲಿ ಮಚ್ಚು ಹಿಡಿದುಕೊಂಡು ಸಾಮಾಜಿಕ ಜಾಲತಾಣದಲ್ಲಿ ತೋರಿಸಿದ್ದಾನೆ. ಆಗ ಪೊಲೀಸರು ಏನು ಮಾಡುತ್ತಿದ್ದರು? ಆ ಯುವಕನನ್ನು ಕೊಲೆಗೆ ಮುಂಚೆ ಯಾಕೆ ಬಂಧಿಸಲಿಲ್ಲ? ಕೊಲೆಯಾದ ಬಳಿಕವೂ ಮುಸ್ಲಿಂ ಸಮುದಾಯದ ಯುವಕರನ್ನು ರಕ್ಷಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಸಾಬರ ಸರ್ಕಾರ:ಅಧಿವೇಶನದಲ್ಲಿ ಈ ಕುರಿತು ಪ್ರಶ್ನಿಸುತ್ತೇನೆ. ಮಚ್ಚು ತೆಗೆದುಕೊಂಡು ಓಡಾಡುವವರಿಗೆ ಸರ್ಕಾರದ ಬೆಂಬಲವಿದೆ. ಸಿಎಂ ಸಿದ್ದರಾಮಯ್ಯ ಈ ಘಟನೆಗೆ ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು. ಈ ಘಟನೆಗೆ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಇದು ಸಾಬರ್‌ ಸರ್ಕಾರವಾಗಿದೆ ಎಂದರು.

ಆ. 11ರಂದು ಗವಿಸಿದ್ದಪ್ಪ ಕೊಲೆ ಪ್ರಕರಣ ಖಂಡಿಸಿ ಜರುಗುವ ಪ್ರತಿಭಟನೆಗೆ ಎಲ್ಲರೂ ಸಹಕರಿಸಬೇಕು. ಇದೇ ನೆಪದಲ್ಲಿ ಗಣೇಶ ಹಬ್ಬಕ್ಕೆ ಅಡ್ಡಿಪಡಿಸಬಾರದು ಎಂದರು.