ಸಾರಾಂಶ
ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿ 2024-25ನೇ ಸಾಲಿನ ಆಸ್ತಿ ವಿವರಗಳನ್ನು ಸಲ್ಲಿಸದ ಐವರು ಸಚಿವರು, 66 ವಿಧಾನಸಭಾ ಸದಸ್ಯರು ಹಾಗೂ 28 ವಿಧಾನ ಪರಿಷತ್ ಸದಸ್ಯರ ಹೆಸರುಗಳನ್ನು ಲೋಕಾಯುಕ್ತ ಸಂಸ್ಥೆ ಪ್ರಕಟಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೇರಿ 2024-25ನೇ ಸಾಲಿನ ಆಸ್ತಿ ವಿವರಗಳನ್ನು ಸಲ್ಲಿಸದ ಐವರು ಸಚಿವರು, 66 ವಿಧಾನಸಭಾ ಸದಸ್ಯರು ಹಾಗೂ 28 ವಿಧಾನ ಪರಿಷತ್ ಸದಸ್ಯರ ಹೆಸರುಗಳನ್ನು ಲೋಕಾಯುಕ್ತ ಸಂಸ್ಥೆ ಪ್ರಕಟಿಸಿದೆ.ಮುನಿಯಪ್ಪ ಅವರಲ್ಲದೆ ಸಚಿವರಾದ ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ರಹೀಂ ಖಾನ್ ಮತ್ತು ಕೆ.ವೆಂಕಟೇಶ್ ಅವರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ. ಇನ್ನು ನಿಗದಿತ ಕಾಲಾವಧಿ ಮುಗಿದ ನಂತರ ಆಸ್ತಿ ವಿವರಗಳನ್ನು ಸಲ್ಲಿಸಿದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಪಟ್ಟಿಯನ್ನೂ ಲೋಕಾಯುಕ್ತ ಸಂಸ್ಥೆ ಪ್ರಕಟಿಸಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆ ಕಲಂ 7ರ ಪ್ರಕಾರ, ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರನೂ ಪ್ರತಿ ವರ್ಷ ಜೂ.30ರ ಒಳಗೆ ತನ್ನ ಮತ್ತು ತನ್ನ ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬೇಕು.;Resize=(128,128))
;Resize=(128,128))
;Resize=(128,128))