ಸಾರಾಂಶ
ವಿಶ್ವ ವಿಖ್ಯಾತ ಹಂಪಿಗೆ ವೀಕೆಂಡ್ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬಂದಿದ್ದು, ಶನಿವಾರ ಹಾಗೂ ಭಾನುವಾರ ಎರಡು ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿ ಸ್ಮಾರಕ ವೀಕ್ಷಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹೊಸಪೇಟೆ
ವಿಶ್ವ ವಿಖ್ಯಾತ ಹಂಪಿಗೆ ವೀಕೆಂಡ್ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬಂದಿದ್ದು, ಶನಿವಾರ ಹಾಗೂ ಭಾನುವಾರ ಎರಡು ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿ ಸ್ಮಾರಕ ವೀಕ್ಷಿಸಿದ್ದಾರೆ.ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಾಲಯ, ರಥಬೀದಿಯ ಸಾಲು ಮಂಟಪಗಳು, ಎದುರು ಬಸವಣ್ಣ ದೇವಾಲಯ, ಕಡಲೆ ಕಾಳು ಗಣಪತಿ, ಸಾಸಿವೆ ಕಾಳು ಗಣಪತಿ, ಶ್ರೀಕೃಷ್ಣ ದೇವಾಲಯ, ಉದ್ದಾನ ವೀರಭದ್ರೇಶ್ವರ ದೇವಾಲಯ, ಬಡವಿಲಿಂಗ, ಉಗ್ರ ನರಸಿಂಹ, ನೆಲಸ್ತರದ ಶಿವ ದೇವಾಲಯ, ಅಕ್ಕ ತಂಗಿ ಗುಡ್ಡ, ಹಜಾರ ರಾಮ ದೇವಾಲಯ, ಕಮಲ ಮಹಲ್, ಆನೆಲಾಯ, ಪಟ್ಟಣ್ಣದ ಎಲ್ಲಮ್ಮ, ಮಹಾನವಮಿ ದಿಬ್ಬ, ರಾಣಿ ಸ್ನಾನ ಗೃಹ, ಕೋಟೆ ಆಂಜನೇಯ, ಸರಸ್ವತಿ ದೇವಾಲಯ, ಪಟ್ಟಾಭಿರಾಮ ದೇವಾಲಯ, ಮಾಲ್ಯವಂತ ರಘುನಾಥ ದೇವಾಲಯ, ಭೀಮನ ದ್ವಾರ, ಗೆಜ್ಜಲ ಮಂಟಪ, ವಿಜಯ ವಿಠಲ ದೇವಾಲಯ, ಕಲ್ಲಿನತೇರು, ಸೀತೆ ಸೆರಗು, ಪುರಂದರದಾಸರ ಮಂಟಪ, ವಿಷ್ಣು ಮಂಟಪ, ಕೋದಂಡ ರಾಮ ದೇವಾಲಯ, ಕುದುರೆ ಗೊಂಬೆ ಮಂಟಪ, ವರಾಹ ದೇವಾಲಯ, ಅಚ್ಯುತರಾಯ ದೇವಾಲಯ, ಕಂಪಭೂಪ ಮಾರ್ಗ, ಪಾನ್ ಸುಪಾರಿ ಬಜಾರ್ ಸೇರಿದಂತೆ ವಿವಿಧ ಸ್ಮಾರಕಗಳು ಹಾಗೂ ಮಂಟಪ, ದೇವಾಲಯ, ರಾಜರ ತುಲಾಭಾರ ಸ್ಮಾರಕ ಸೇರಿದಂತೆ ತುಂಗಭದ್ರಾ ನದಿ ತೀರವನ್ನೂ ದೇಶ, ವಿದೇಶಿ ಪ್ರವಾಸಿಗರು ವೀಕ್ಷಿಸಿದರು.
ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರಿಂದ ಹಂಪಿಯಲ್ಲಿ ಪ್ರವಾಸೋದ್ಯಮ ಚೇತರಿಸಿತು. ಟ್ಯಾಕ್ಸಿ ಚಾಲಕರು, ಆಟೋ ಚಾಲಕರು, ಗೈಡ್‌ಗಳು, ಹೋಟೆಲ್ ಮಾಲೀಕರಿಗೆ ಅನುಕೂಲವಾಗಿದ್ದು, ಅಂಗಡಿಗಳು, ಗೂಡಂಗಡಿಗಳಲ್ಲಿ ವ್ಯಾಪಾರ- ವಹಿವಾಟು ಜೋರಾಗಿಯೇ ನಡೆಯಿತು. ಪೊಲೀಸರು ಕೂಡ ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.