ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಡಿ.ಆರ್.ಗುರು ಶಿಷ್ಯರ ಬಳಗ, ಅನಿಕೇತನ ಲಯನ್ ಸಂಸ್ಥೆ, ಸರ್ಕಾರಿ ರಕ್ತ ನಿಧಿ ಕೇಂದ್ರ ಮಂಡ್ಯ (ಮಿಮ್ಸ್ ) ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.ಬಳಗದ ಅಧ್ಯಕ್ಷ ಎ.ಎಸ್.ದೇವರಾಜು ಮಾತನಾಡಿ, ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಗಿದೆ. ಇದರು 100 ರೋಗಿಗಳಿಗೆ ನೆರವಾಗಲಿದೆ. ರಕ್ತದ ಅವಶ್ಯಕತೆ ಇರುವವರಿಗೆ ರಕ್ತ ನೀಡುವ ಮೂಲಕ ಜೀವಗಳನ್ನು ಉಳಿಸಿರುವಂತಹ ಪುಣ್ಯ ಕೆಲಸವನ್ನು ಮಾಡಿದ ಎಲ್ಲರಿಗೂ ಧನ್ಯವಾದಗಳು. ಇಂತಹ ಸ್ಪೂರ್ತಿದಾಯಕ ಕೆಲಸ ಮಾಡಲು ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಕೋರಿದರು.
ಮಿಮ್ಸ್ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಮೊಹಮ್ಮದ್ ಶಫಿ ಮಾತನಾಡಿ, ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡುವುದರಿಂದ ಹಲವು ಜೀವಗಳಿಗೆ ಜೀವದಾನ ಮಾಡಿದಂತಾಗುತ್ತದೆ. ಕಳೆದ ಬಾರಿ 400ಕ್ಕು ಹೆಚ್ಚು ಜನರು ರಕ್ತದಾನ ಮಾಡಿದ್ದರು. ಇಂದು ಐವತ್ತಕ್ಕೂ ಹೆಚ್ಚು ಜನ ರಕ್ತದಾನ ಮಾಡಿದ್ದಾರೆ ಎಂದು ತಿಳಿಸಿದರು.ಈ ವೇಳೆ ಬಳಗದ ಲಯನ್ಸ್ ಕ್ಲಬ್ ನ ಎನ್.ಕೆ.ಕುಮಾರ್, ಡಿ.ಎಲ್ .ಮಾದೇಗೌಡ, ಪ್ರಭು, ವೀರಣ್ಣಗೌಡ, ಭಾಸ್ಕರ ಕೆ. ಶಿವರಾಜು ,ಡಾ.ಷಂಶುದ್ದೀನ್, ಸಿ .ಪ್ರವೀಣ ,ಮಹೇಶ ಡಿ. ಉಮೇಶ, ಶ್ರೀನಾಥ್, ಸುರೇಂದ್ರ, ರಾಜೇಂದ್ರ, ಗುರುಸಿದ್ಧ, ಜಿ.ಎಸ್. ಕೃಷ್ಣ, ಮಂಜು, ಸೇರಿದಂತೆ ಇತರರು ಇದ್ದರು.ಇಂದು ಬಿಜೆಪಿ ಪಕ್ಷ ಸೇರ್ಪಡೆ, ಅಭಿನಂದನಾ ಸಮಾರಂಭ
ಮಂಡ್ಯ:ತಾಲೂಕಿನ ತಗ್ಗಹಳ್ಳಿಯಲ್ಲಿ ನ.24ರಂದು ಬಿಜೆಪಿ ಪಕ್ಷ ಸೇರ್ಪಡೆ ಹಾಗೂ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ಇಂಡುವಾಳು ತಿಳಿಸಿದ್ದಾರೆ.
ಗ್ರಾಮದ ಶ್ರೀಕಾಳಮ್ಮ ದೇವಾಲಯ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ 150ಕ್ಕೂ ಹೆಚ್ಚು ಮಂದಿ ವಿವಿಧ ಪಕ್ಷಗಳ ಕಾರ್ಯಕರ್ತರು ದೇಶದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಿದ್ದಾರೆ.ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೈಸೂರು- ಕೊಡಗು ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಮಾಜಿ ಸಚಿವರಾದ ಬೈರತಿ ಬಸವರಾಜು, ಕೆ.ಸಿ.ನಾರಾಯಣಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್. ಇಂದ್ರೇಶ್, ಮಾಜಿ ಅಧ್ಯಕ್ಷ ಸಿ.ಪಿ. ಉಮೇಶ್, ಬಿಜೆಪಿ ಮುಖಂಡ ಕೆ.ಎಸ್.ನಂಜುಂಡೇಗೌಡ, ಡಾ. ಸಿದ್ದರಾಮಯ್ಯ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ, ಜಿಪಂ ಮಾಜಿ ಸದಸ್ಯ ಎಸ್.ಎಲ್.ಲಿಂಗರಾಜು, ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಜೆ.ಅಶೋಕ್ ಜಯರಾಮ್, ಮಳವಳ್ಳಿ ಮುನಿರಾಜು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೇಳಾಪುರ ಶ್ರೀಧರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಮಂಗಳ, ತಾಲೂಕು ಬಿಜೆಪಿ ಅಧ್ಯಕ್ಷ ಪೀಹಳ್ಳಿ ರಮೇಶ್, ಪಕ್ಷದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಪದಾಧಿಕಾರಿಗಳು ಆಗಮಿಸುವರು ಎಂದು ತಿಳಿಸಿದ್ದಾರೆ.