ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜು. 3ರಂದು ದಲಿತ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಜಿಲ್ಲೆಯಿಂದ 500 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ದಸಂಸ ಸುಂದರ್ ಮಾಸ್ತರ್ ತಿಳಿಸಿದ್ದಾರೆ.
ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜು. 3ರಂದು ದಲಿತ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಜಿಲ್ಲೆಯಿಂದ 500 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ದಸಂಸ ಸುಂದರ್ ಮಾಸ್ತರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಗಣ್ಯರು, ಬುದ್ಧಿಜೀವಿಗಳು, ಪ್ರಗತಿಪರರು, ಸಾಹಿತಿಗಳು, ಬರಹಗಾರರು ಮತ್ತು ರೈತ ಮುಖಂಡರು ಭಾಗವಹಿಸುತ್ತಾರೆ. ದಲಿತರಿಗೆ ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆ, ಉದ್ಯೋಗ ನೇಮಕಾತಿ ತ್ವರಿತಗೊಳಿಸಬೇಕು ಎಂದು ಆಗ್ರಹಿಸಿ ಈ ಸಮಾವೇಶ ನಡೆಯಲಿವೆ ಎಂದರು.ದಲಿತರ ವಿಶೇಷ ಘಟಕ ಯೋಜನೆಯ 200 ಕೋಟಿ ರು.ಗೂ ಅಧಿಕ ಹಣವನ್ನು ನಿಯಮಬಾಹಿರವಾಗಿ ಸಾರಿಗೆ ಇಲಾಖೆ ಸಿಬ್ಬಂದಿಗಳ ವೇತನಕ್ಕೆ ನೀಡಿರುವುದನ್ನು ಮರು ವಸೂಲಿ ಮಾಡಬೇಕು. ವಿಶೇಷ ಘಟಕ ಯೋಜನೆ ಅನುಷ್ಠಾನಕ್ಕೆ ಏಕಗವಾಕ್ಷಿ ನೀತಿ ಜಾರಿಗೊಳಿಸಬೇಕು. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಬಳಸಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಪರಿಶಿಷ್ಟರ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಸಮಾವೇಶದ ಮೂಲಕ ಸರ್ಕಾರವನ್ನು ಆಗ್ರಹಿಸಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ದಸಂಸ ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ ಗಿಳಿಯಾರು, ಜಿಲ್ಲಾ ಸಮಿತಿಯ ಸದಸ್ಯ ಸುರೇಶ್ ಬಾರ್ಕೂರು, ಜಿಲ್ಲಾ ಸಂಘಟನಾ ಸಂಚಾಲಕ ಸುರೇಶ್ ಹಕ್ಲಾಡಿ, ಬ್ರಹ್ಮಾವರ ತಾಲೂಕು ಸಂಚಾಲಕ ಶ್ಯಾಮಸಂದರ ತೆಕ್ಕಟ್ಟೆ ಉಪಸ್ಥಿತರಿದ್ದರು.