ಸಾರಾಂಶ
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂಗಳವಾರ ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ವಿ.ವೆಂಕಟೇಶ್ ಹಾಗೂ ಶಾಸಕರ ತಂದೆಯವರಾದ ಮಾಜಿ ಸಚಿವ ವೆಂಕಟರಮಣಪ್ಪ ಅವರು ಭೇಟಿಯಾಗಿ ಪಾವಗಡ ತಾಲೂಕಿನ ವಸತಿ ಹೀನರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 500 ಮನೆ ಮಂಜೂರಾತಿ ಕೋರಿ ಮನವಿ ಮಾಡಿದರು.
ಪಾವಗಡ: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮಂಗಳವಾರ ಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ವಿ.ವೆಂಕಟೇಶ್ ಹಾಗೂ ಶಾಸಕರ ತಂದೆಯವರಾದ ಮಾಜಿ ಸಚಿವ ವೆಂಕಟರಮಣಪ್ಪ ಅವರು ಭೇಟಿಯಾಗಿ ಪಾವಗಡ ತಾಲೂಕಿನ ವಸತಿ ಹೀನರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 500 ಮನೆ ಮಂಜೂರಾತಿ ಕೋರಿ ಮನವಿ ಮಾಡಿದರು. ಹಾಗೆಯೇ ತಾಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ 2ಕೋಟಿ ರು.ಅನುದಾನ, ಪಟ್ಟಣದಲ್ಲಿ ಅಲ್ಪಸಂಖ್ಯಾತ ಮುರಾರ್ಜಿ ವಸತಿ ಶಾಲೆ ಮಂಜೂರಾಗಿ ಕುರಿತು ಚರ್ಚೆ ನಡೆಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಜಮೀರ್ ಆದಮ್ಮದ್ ಜನಪರವಾದ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.