ಸಾರಾಂಶ
ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳಿಬಾಣೆ ಸಮೀಪ ಕಾವೇರಿ ನದಿ ತೀರದಲ್ಲಿ ನಾಪೋಕ್ಲು ಪಟ್ಟಣದ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪ್ರದೇಶವನ್ನು ಸ್ವಚ್ಛಗೊಳಿಸಿ ಸಿ ಸಿ ಕ್ಯಾಮೆರಾ ಅಳವಡಿಸಲಾಯಿತು.ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಶೆಜ್ಞಾನಿಕ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದು ರಸ್ತೆ ಬದಿ ಹಾಗೂ ನದಿ ತೀರದಲ್ಲಿ ತ್ಯಾಜ್ಯ ಸುರಿಯುವವರ ಮೇಲೆ 5000 ರು. ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೊದ್ದೂರು ಪಂಚಾಯಿತಿ ಅಧ್ಯಕ್ಷ ಎಚ್. ಎ. ಹಂಸ ತಿಳಿಸಿದ್ದಾರೆ.
------------------------ಕೊಡಗಿನ ಕೆಲವೆಡೆ ಉತ್ತಮ ಮಳೆ
ಕನ್ನಡಪ್ರಭ ವಾರ್ತೆ ಮಡಿಕೇರಿಕೊಡಗು ಜಿಲ್ಲೆಯ ಕೆಲವು ಕಡೆಗಳಲ್ಲಿ ಶನಿವಾರ ಕೆಲ ಕಾಲ ಉತ್ತಮ ಮಳೆಯಾಯಿತು.
ಜಿಲ್ಲೆಯ ಕುಶಾಲನಗರ, ಕೂಡಿಗೆ, ಗುಡ್ಡೆಹೊಸೂರು ಹಾರಂಗಿ ಸುತ್ತಮುತ್ತ ಒಂದು ಗಂಟೆಗಳ ಕಾಲ ಮಳೆ ಸುರಿಯಿತು. ಕಳೆದ ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಸುರಿದ ಹಿನ್ನೆಲೆಯಲ್ಲಿ ಸವಾರರ ಪರದಾಟ ನಡೆಸಿದರು.ಇನ್ನೇನು ಕೆಲವೇ ದಿನಗಳಲ್ಲಿ ಜಿಲ್ಲೆಗೆ ಮುಂಗಾರು ಮಳೆ ಆಗಮನವಾಗುವ ಹಿನ್ನೆಲೆಯಲ್ಲಿ ರೈತರು ಕೂಡ ಕೃಷಿಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ರೈತರು ಮಾಡಿಕೊಳ್ಳುತ್ತಿದ್ದಾರೆ.
ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.28 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 332.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 175.25 ಮಿ.ಮೀ ಮಳೆಯಾಗಿತ್ತು.ಹಾರಂಗಿ ಜಲಾಶಯದ ನೀರಿನ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2824.12 ಅಡಿಗಳು. ಕಳೆದ ವರ್ಷ ಇದೇ ದಿನ 2819.46 ಅಡಿಗಳು. ಇಂದಿನ ನೀರಿನ ಒಳಹರಿವು 242 ಕ್ಯುಸೆಕ್, ಕಳೆದ ವರ್ಷ ಇದೇ ದಿನ 78 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.