ಸಾರಾಂಶ
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ ಒಟ್ಟು ರು.13074.44 ಲಕ್ಷಗಳ ವಹಿವಾಟು ನಡೆಸಿದ್ದು, ರು.54.08 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡುವ ಬಗ್ಗೆ ವಾರ್ಷಿಕ ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ.
ಕನ್ನಡಪ್ರಭ ವಾರ್ತೆ ಕುಶಾಲನಗರ
ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ ಒಟ್ಟು ರು.13074.44 ಲಕ್ಷಗಳ ವಹಿವಾಟು ನಡೆಸಿದ್ದು, ರು.54.08 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡುವ ಬಗ್ಗೆ ವಾರ್ಷಿಕ ಮಹಾಸಭೆಯ ಒಪ್ಪಿಗೆಗೆ ಮಂಡಿಸಲು ತೀರ್ಮಾನಿಸಲಾಗಿದೆ ಎಂದರು.ಸಂಘವು ಎಂ.ಸಿ.ಎಫ್ ಮದ್ರಾಸ್ ಫರ್ಟಿಲೈಸರ್ಸ್, ಇಂಡಿಯನ್ ಪೊಟ್ಯಾಷ್ ಇನ್ನೊ ಫ್ಯಾಕ್ಸ್, ಪ್ಯೂಚರ್ ಫರ್ಟಿಲೈಸರ್ಸ್ ಜುವಾರಿ, ಕೋರಮಂಡಲ್, ಸ್ಟೇನ್ಸ್, ಸಂಸ್ಥೆಗಳ ಸಗಟು ಮತ್ತು ರಿಟೇಲ್ ಲೈಸನ್ಸ್ ಹೊಂದಿದ್ದು ನೇರವಾಗಿ ರಸಗೊಬ್ಬರ ಖರೀದಿಸಿ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. 2023- 24ನೇ ಸಾಲಿನಲ್ಲಿ ಸದಸ್ಯರು ಹಾಗೂ ಗ್ರಾಹಕರಿಗೆ ಬೇಕಾದ ರಸಗೊಬ್ಬರ, ಹತ್ಯಾರು, ಸಿಮೆಂಟ್ ಹಾಗೂ ಇತರೆ ಅಗತ್ಯ ಸಮಾಗ್ರಿ ಬಾಪು ರು.486.70 ಲಕ್ಷಗಳ ವಹಿವಾಟು ನಡೆಸಿ ರು.19.81 ಲಕ್ಷಗಳ ವ್ಯಾಪಾರ ಲಾಭ ಗಳಿಸಲಾಗಿದೆ ಎಂದು ವಿವರಿಸಿದರು.
ಮಹಾಸಭೆ: ಸಂಘದ 47ನೇ ಮಹಾಸಭೆ 25ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಶ್ರೀ ನರೇಂದ್ರ ಮೋದಿ ಭವನದಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.ಸಂಘದ ಉಪಾಧ್ಯಕ್ಷ ಪೇರಿಯನ ಎಸ್.ಪೂಣಚ್ಚ, ನಿರ್ದೇಶಕರಾದ ಕೊಂಗೇಟೀರ ವಾಣಿ ಕಾಳಪ್ಪ, ಬಿ.ಎಂ.ಕಾಶಿ, ಮುಳ್ಳಂಡ ಎ.ಮಾಯಮ್ಮ ಹಾಗೂ ಅಕ್ಕಾರಿ ಆರ್.ದಯಾನಂದ ಸುದ್ದಿಗೋಷ್ಠಿಯಲ್ಲಿದ್ದರು.