ಸಾರಾಂಶ
ಚಾಮರಾಜನಗರದ ಟೌನ್‌ನ ನಿವಾಸಿ ಪುಷ್ಪಲತಾ ಎಂಬವರು ಸೆ.1ರಂದು ಸತ್ಯಮಂಗಲಕ್ಕೆ ಮದುವೆಗೆಂದು ತೆರಳಿದ್ದ ಸಂದರ್ಭದಲ್ಲಿ ಕಳೆದುಕೊಂಡಿದ್ದ ಸುಮಾರು 27 ಲಕ್ಷ ರು. ಮೌಲ್ಯದ ಚಿನ್ನಾಭರಣಗಳನ್ನು ಪಟ್ಟಣ ಠಾಣೆ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರದ ಟೌನ್‌ನ ನಿವಾಸಿ ಪುಷ್ಪಲತಾ ಎಂಬವರು ಸೆ.1ರಂದು ಸತ್ಯಮಂಗಲಕ್ಕೆ ಮದುವೆಗೆಂದು ತೆರಳಿದ್ದ ಸಂದರ್ಭದಲ್ಲಿ ಕಳೆದುಕೊಂಡಿದ್ದ ಸುಮಾರು 27 ಲಕ್ಷ ರು. ಮೌಲ್ಯದ ಚಿನ್ನಾಭರಣಗಳನ್ನು ಪಟ್ಟಣ ಠಾಣೆ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ವ್ಯಾನಿಟಿ ಬ್ಯಾಗಿನಲ್ಲಿದ್ದ ಚಿನ್ನದ ಆಭರಣಗಳನ್ನು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಅದರಲ್ಲಿದ್ದ ಸುಮಾರು 540 ಗ್ರಾಂ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದಾರೆ ಎಂದು ಪುಷ್ಪಲತಾ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಎಂದು ಎಸ್ಪಿ ಕವಿತಾ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಈ ಪ್ರಕರಣ ಸಂಬಂಧ ಪೊಲೀಸ್ ಉಪಾಧೀಕ್ಷಕ ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ ಚಾ.ನಗರ ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಎ.ಕೆ ರಾಜೇಶ್ ನೇತೃತ್ವದಲ್ಲಿ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಸಿದ್ದರಾಜು ಎಂ ಹಾಗೂ ಕ್ರೈಂ ಸಿಬ್ಬಂದಿ ಈ ಪ್ರಕರಣದಲ್ಲಿ ತಮಿಳುನಾಡು ಮೂಲದ ಆರೋಪಿ ಲಕ್ಷ್ಮೀ ಮಧುರೈ ಎಂಬವರನ್ನು ದಸ್ತಗಿರಿ ಮಾಡಲಾಗಿದೆ ಎಂದು ತಿಳಿಸಿದರು. ವಿಚಾರಣೆಗೆ ಒಳಪಡಿಸಿದಾಗ ಆರೋಪಿತಳಿಂದ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಳೆದುಕೊಂಡಿದ್ದ 432 ಗ್ರಾಂ ತೂಕದ ಚಿನ್ನಾಭರಣಗಳನ್ನು ಪುಣಜೂರು ಬಳಿ ಕುಂಬಾರಗುಂಡಿಯಲ್ಲಿ ಅಮಾನತು ಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ ಸುಮಾರು ₹27 ಲಕ್ಷ ಎಂದು ಅಂದಾಜು ಮಾಡಲಾಗಿದೆ ಎಂದರು.
ಈ ಪ್ರಕರಣದ ಆರೋಪಿಗಳ ಹಾಗೂ ಮಾಲಿನ ಪತ್ತೆ ಕಾರ್ಯದಲ್ಲಿ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎ.ಕೆ ರಾಜೇಶ್, ಸಿದ್ದರಾಜು ಎಂ, ಕ್ರೈಂ ಪಿಎಸ್‌ಐ, ಕ್ರೈಂ ಸಿಬ್ಬಂಧಿ ಲೋಕೇಶ್, ಕೃಷ್ಣಮೂರ್ತಿ.ಪಿ, ಮೋಹನ್ ಕುಮಾರ್, ಮಹದೇವ, ನಿಂಗರಾಜು ಎಸ್, ರಾಜೇಶ್ವರಿ ಹೇಮಾ, ಅವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದು, ಇವರನ್ನುಎಸ್ಪಿ ಡಾ. ಬಿ.ಟಿ.ಕವಿತಾ ಶ್ಲಾಘಿಸಿದ್ದಾರೆ.