ಸಾರಾಂಶ
ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
ಚಿತ್ರದುರ್ಗ: ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಂಜುನಾಥ್. ಎಸ್.ನಾಡರ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಳ ಸಂಪರ್ಕ ಕಲ್ಪಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ 55 ಲೀಟರ್ ಶುದ್ಧ ನೀರು ಒದಗಿಸಲಾಗುತ್ತಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಗ್ರಾಮ ಪಂಚಾಯಿತಿಯಿಂದ ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ವಿವಿಧ ಘಟಕಾಂಶಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ಎಲ್ಲಾ ಗ್ರಾಪಂ ಸದಸ್ಯರು ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಇದರ ಬಗ್ಗೆ ಮಾಹಿತಿ ತಿಳಿದುಕೊಂಡು ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಜಲ ಜೀವನ್ ಮಿಷನ್ ಯೋಜನೆಯ ತಾಲೂಕು ಸಮುದಾಯ ಸಂಘಟಕ ಡಾ.ಜಿ.ಎಸ್.ನಾಗರಾಜ ಮಾತನಾಡಿ, ಜಲ ಜೀವನ್ ಮಿಷನ್ ಯೋಜನೆ ಹಾಗೂ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಬಸವರಾಜ, ಸದಸ್ಯ ತಿಪ್ಪೇಸ್ವಾಮಿ ನಾಯಕ್, ಪಿಡಿಒ ನಾಗರಾಜ್ ಹಾಗೂ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು, ನೀರುಗಂಟಿಗಳು ಹಾಜರಿದ್ದರು.