ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ಜನರಿಗೆ ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ.

ಡಂಬಳ: ನಮ್ಮ ದೇಶ ಸಾವಿರಾರು ದೇವರನ್ನು ಆರಾಧಿಸುವಂತಹ ಸಂಸ್ಕೃತಿ, ಪರಂಪರೆ ಶ್ರೇಷ್ಠತೆಯ ಪ್ರತೀಕವಾಗಿದೆ‌‌‌. ಆ ಹಿನ್ನೆಲೆ ಅಭಿವೃದ್ಧಿ ಜತೆಗೆ ದೇವಸ್ಥಾನಗಳ‌ ಜೀರ್ಣೋದ್ಧಾರಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.

ಡಂಬಳ ಹೋಬಳಿಯ ಶಿವಾಜಿನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಂಡೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಸರ್ಕಾರದ ಅಭಿವೃದ್ಧಿ ಕೆಲಸಗಳು ಉಳಿಯುತ್ತವೆ. ಟೀಕೆಗಳು ಸಾಯುತ್ತವೆ. ಆದ್ದರಿಂದ ಯಾವುದೇ ಟೀಕೆಗೆ ಎದೆಗುಂದದೆ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳು ಜನರನ್ನು ತಲುಪುತ್ತಿವೆ ಎಂದರು.

ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ಜನರಿಗೆ ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ. ರಾಜ್ಯದಲ್ಲಿ ₹56 ಸಾವಿರ ಕೋಟಿಯನ್ನು ವಾರ್ಷಿಕವಾಗಿ ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 600 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ ಎಂದರು.

ಸರ್ಕಾರಿ ಬಸ್‌ನಲ್ಲಿ ಮಹಿಳೆಯರು ರಾಜ್ಯಾದ್ಯಂತ ಓಡಾಡಬಹುದು. 200 ಯುನಿಟ್‌ವರೆಗೆ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ₹2 ಸಾವಿರ ನೀಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ರ ನೇತೃತ್ವದ ಸರ್ಕಾರ ಯಾವುದೇ ಧರ್ಮ, ಜಾತಿ ನೋಡಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿಲ್ಲ. ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲ ಜನರಿಗೂ ತಲುಪುತ್ತಿವೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಡಿ.ಡಿ. ಮೋರನಾಳ, ಉಪಾಧ್ಯಕ್ಷ ಕುಮಾರಸ್ವಾಮಿ ಹಿರೇಮಠ, ಈಶಪ್ಪ ಓಲಿ, ಮುಖಂಡ ಮಹೇಶ ಗಡಗಿ, ಕುಬೇರ ನಾಯಕ, ಬಸವರಡ್ಡಿ ಬಂಡಿಹಾಳ, ಗೋಪಾಲ ಲಮಾಣಿ, ಬಾಬುಸಾಬ ಮೂಲಿಮನಿ, ಮಲ್ಲಿಕಾರ್ಜುನ ಪ್ಯಾಟಿ,‌ ತೇಜಪ್ಪ ರಾಮಚಂದ್ರಪ್ಪ, ಗೋವಿಂದ ಲಮಾಣಿ, ನಾಗರಾಜ ಸಜ್ಜನ, ಶರಣಪ್ಪ ಚೆನ್ನಳ್ಳಿ, ಆನಂದ ಲಮಾಣಿ, ಕುಬೇರ ಲಮಾಣಿ, ಶಿವಪ್ಪ ನಾಯಕ, ಮಲ್ಲೇಶ ಲಮಾಣಿ, ಸಂತೋಷ ಲಮಾಣಿ, ಠಾಕೋರ ಲಮಾಣಿ, ಶಂಕ್ರಪ್ಪ ಲಮಾಣಿ, ಗಂಗಪ್ಪ ಲಮಾಣಿ, ಸೋಮು ನಾಯಕ, ತಹಸೀಲ್ದಾರ್ ಯರಿಸ್ವಾಮಿ, ಸಿಪಿಐ ಯಶವಂತ ಬಿಸನಳ್ಳಿ, ಜಿಪಂ ಕಾರ್ಯನಿರ್ವಾಹಕ ಅಭಿಯಂತರ ನರಲೇಕರ, ಆರ್‌ಡಬ್ಲ್ಯುಎಸ್ ಮಂಜುನಾಥ ಕಲಬುರ್ಗಿ, ಕಂದಾಯ ಅಧಿಕಾರಿ ಪ್ರಭು ಬಾಗಲಿ ಇತರರು ಇದ್ದರು.