ಕನ್ನಡಪ್ರಭ ವಾರ್ತೆ ವಿರಾಜಪೇಟೆ

ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕು ಮತ್ತು ಹಾತೂರು ಒಕ್ಕಲಿಗರ ಸಂಘದ ಸಹಯೋಗದಲ್ಲಿ ಕೆಂಪೇ ಗೌಡ ಜಯಂತಿ ಪ್ರಯುಕ್ತ ಆಯೋಜಿಸಿದ ಐದನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರ ಪತ್ನಿ ಕಾಂಚನ್ ಪೊನ್ನಣ್ಣ ಭಾಗವಹಿಸಿದ್ದರು.

ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಸಕರು ತುರ್ತು ಕಾರ್ಯ ಒತ್ತಡದಿಂದಾಗಿ ಈ ಕಾರ್ಯಕ್ರಮವನ್ನು ಉದ್ಘಾಟಿಸಲು ಸಾಧ್ಯವಾಗದಿರುವುದರಿಂದ ಅವರ ಪರವಾಗಿ ತಾನು ಇಲ್ಲಿ ಭಾಗವಹಿಸಿದ್ದೇನೆ. ಕ್ರೀಡಾಕೂಟ ಆಯೋಜನೆ ಬಗ್ಗೆ ಹಾಗೂ ಗ್ರಾಮೀಣ ಕ್ರೀಡಾಕೂಟಕ್ಕೆ ಪ್ರೋತ್ಸಾಹ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾಂಚನ್ ಪೊನ್ನಣ್ಣ, ಶಾಸಕರು ನೀಡಿದ ಶುಭ ಸಂದೇಶವನ್ನು ಆಯೋಜಕರಿಗೆ ತಿಳಿಸಿದರಲ್ಲದೆ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ವಿರಾಜಪೇಟೆ ಮತ್ತು ಪೊನ್ನಂಪೇಟೆ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಮಧುಸೂಧನ್ ವಿ.ಜಿ., ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷ ಎಚ್.ಡಿ. ಶ್ರೀನಿವಾಸ, ಹಾತೂರು ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಜಿ. ಅನಿಲ್ ಕುಮಾರ್ , ದೊಡ್ಡಮನೆ ಕೀರ್ತಿ ಕಿರಣ್, ಒಕ್ಕಲಿಗ ಸಂಘದ ಸದಸ್ಯರು, ಪದಾಧಿಕಾರಿಗಳು, ಕ್ರೀಡಾ ಪ್ರೇಮಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.