ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ ಸ್ವಾತಂತ್ರ್ಯೋತ್ಸವ ದಿನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿ ಕಾರ್ಯಕರ್ತರು ತ್ರಿವರ್ಣ ಧ್ವಜ ಹಿಡಿದು ಘೋಷಣೆಗಳನ್ನು ಮೊಳಗಿಸಿದರು. ನಗರದ ಶಿವಾಜಿ ವೃತ್ತದಿಂದ ಆರಂಭವಾದ ಬೈಕ್ ರ್‍ಯಾಲಿ ಸೇವಾಲಾಲ್ ವೃತ್ತದವರೆಗೆ ನಡೆಯಿತು.
ಕನ್ನಡಪ್ರಭ ವಾರ್ತೆ ಇಂಡಿ
ಸ್ವಾತಂತ್ರ್ಯೋತ್ಸವ ದಿನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರಿಂದ ಹರ್ ಘರ್ ತಿರಂಗಾ ಯಾತ್ರೆ ಪ್ರಯುಕ್ತ ಬೈಕ್ ರ್‍ಯಾಲಿ ನಡೆಸಿದರು. ಬಿಜೆಪಿ ಕಾರ್ಯಕರ್ತರು ತ್ರಿವರ್ಣ ಧ್ವಜ ಹಿಡಿದು ಘೋಷಣೆಗಳನ್ನು ಮೊಳಗಿಸಿದರು. ನಗರದ ಶಿವಾಜಿ ವೃತ್ತದಿಂದ ಆರಂಭವಾದ ಬೈಕ್ ರ್‍ಯಾಲಿ ಸೇವಾಲಾಲ್ ವೃತ್ತದವರೆಗೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮುಖಂಡ ಕಾಸುಗೌಡ ಬಿರಾದಾರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ
ಬಸವರಾಜ ಹೂಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಯುವ ಮೋರ್ಚಾ ಅಧ್ಯಕ್ಷರಾಚು ಬಡಿಗೇರ, ಭಾರತಕ್ಕೆ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿದ್ದಲ್ಲ. ಸ್ವಾತಂತ್ರ ಪೂರ್ವದಲ್ಲಿ ಅಪ್ರತಿಮ ದೇಶಭಕ್ತರ ನಿರಂತರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ. ನಾವಿಂದು ಸ್ವಾತಂತ್ರ್ಯದ ಸವಿಯನ್ನು ಅನುಭವಿಸಲು 6.72 ಲಕ್ಷ ಜನರು ಮಾರಣ ಹೋಮ, ಬಲಿದಾನ ನಡೆದಿದೆ ಎಂದು ವಿವರಿಸಿದರು. ಆದ್ದರಿಂದ ದೇಶಭಕ್ತಿ ನಮ್ಮ ಉಸಿರಾಗಬೇಕು ಎಂದು ಹೇಳಿದರು.
ಅನೀಲಗೌಡ ಬಿರಾದಾರ, ಅನೀಲ ಜಮಾದಾರ, ಹಣಮಂತ್ರಾಯಗೌಡ ಪಾಟೀಲ, ಸಿದ್ದಲಿಂಗ ಹಂಜಗಿ, ರಾಜಕುಮಾರ ಸಗಾಯಿ, ದೇವೇಂದ್ರ ಕುಂಬಾರ, ಸಂಜು ದಶವಂತ, ವಿಜುಗೌಡ ಪಾಟೀಲ, ಸಂತೋಷಗೌಡ ಪಾಟೀಲ, ರಾಮಸಿಂಗ್ ಕನ್ನೊಳ್ಳಿ, ಅಶೋಕಗೌಡ ಬಿರಾದಾರ, ಪ್ರಶಾಂತ ಲಾಳಸಂಗಿ, ಮಂಜು ದೇವರ, ಶಿವು ಬಗಲಿ, ಸೋಮು ನಿಂಬರಗಿಮಠ, ಪುಟ್ಟುಗೌಡ ಪಾಟೀಲ, ಆದಿತ್ಯ ಶಿಂಂಧೆ, ಶಾಂತು ಕಂಬಾರ, ಬಾಗೇಶ ಮಲಘಾಣ, ಪ್ರಶಾಂತ ಗವಳಿ, ಬತ್ತುಸಾಹುಕಾರ ಹಾವಳಗಿ, ವಿಜು ಮಾನಾ, ರಾಜಶೇಖರ ಯರಗಲ್ಲ ಮೊದಲಾದವರು ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.