ಸಾರಾಂಶ
ಶಾಸಕರು ಶಾಲಾ ಆವರಣದಲ್ಲಿ ನಿಂಬೆ ಗಿಡವನ್ನು ನೆಡುವುದರ ಮೂಲಕ, ಮಕ್ಕಳು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಿ.
ಹೂವಿನಹಡಗಲಿ: ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಬಾಳೆಹಣ್ಣು ವಿಚಾರಣೆಯಿಂದ, ಮಕ್ಕಳ ಬೌದ್ಧಿಕ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದು ಶಾಸಕ ಎಲ್. ಕೃಷ್ಣನಾಯ್ಕ ಹೇಳಿದರು.ಪಟ್ಟಣದ ತಳವಾರ ದೊಡ್ಡ ವೆಂಕಟಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶಾಲಾ ಶಿಕ್ಷಣ ಇಲಾಖೆ, ಅಕ್ಷರ ದಾಸೋಹ ಬಿಸಿಯೂಟ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಉಚಿತವಾಗಿ ನೀಡುವ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ತಾಲೂಕು ಮಟ್ಟದ ಕಾರ್ಯಕ್ರಮವನ್ನು ಮಕ್ಕಳಿಗೆ ಮೊಟ್ಟೆ ವಿತರಿಸುವ ಮೂಲಕ ಚಾಲನೆ ನೀಡಿದರು.
ಶಾಸಕರು ಶಾಲಾ ಆವರಣದಲ್ಲಿ ನಿಂಬೆ ಗಿಡವನ್ನು ನೆಡುವುದರ ಮೂಲಕ, ಮಕ್ಕಳು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಿ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ ಮಾತನಾಡಿ, ತಾಲೂಕಿನ ಸರ್ಕಾರಿ ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಹೇಳಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ ನೂತನ ಯೋಜನೆ ಕುರಿತು ಮಾಹಿತಿ ನೀಡಿದರು.ತಹಸೀಲ್ದಾರ್ ಸಂತೋಷ್ ಕುಮಾರ್, ಕ್ಷೇತ್ರ ಸಮನ್ವಯ ಅಧಿಕಾರಿ ಎ.ಕೋಟೆಪ್ಪ, ವಲಯ ಸಂಪನ್ಮೂಲ ವ್ಯಕ್ತಿ ಚನ್ನವೀರ ಗೌಡ , ಶಾಲೆಯ ಮುಖ್ಯ ಶಿಕ್ಷಕಿ ಗಿರಿಜಮ್ಮ, ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪೋಷಕರು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಇದೇ ವೇಳೆ ಶಾಸಕರು ಬಿಸಿಯೂಟ ಸವಿದು ಶುಚಿ ರುಚಿ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.