ಸಾರಾಂಶ
ಕನ್ನಡ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯಲ್ಲಿ ಶನಿವಾರ ನಡೆದ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ, 5 ಯುವಕರನ್ನು ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ. ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿ : ಕನ್ನಡ ರಾಜ್ಯೋತ್ಸವ ಅಂಗವಾಗಿ ಬೆಳಗಾವಿಯಲ್ಲಿ ಶನಿವಾರ ನಡೆದ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ, 5 ಯುವಕರನ್ನು ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ. ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು
ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯಲ್ಲಿ ಶನಿವಾರ ಸಂಜೆ ಭವ್ಯ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆ ನಗರದ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಬರುತ್ತಿದ್ದಂತೆ ಗುಂಪಿನಲ್ಲಿ ಮೆರವಣಿಗೆಯೊಳಗೆ ಏಕಾಏಕಿ ನುಸುಳಿ ಬಂದ ದುಷ್ಕರ್ಮಿಗಳು, ಯದ್ವಾ ತದ್ವಾ ದಾಳಿ ನಡೆಸಿ, ಯುವಕರಿಗೆ ಚಾಕುವಿನಿಂದ ಇರಿದು, ಪರಾರಿಯಾದರು. ಈ ವೇಳೆ, ಬೆಳಗಾವಿಯ ಗುರುನಾಥ ವಕ್ಕುಂದ, ಸಚಿನ ಕಾಂಬಳೆ, ಲೋಕೇಶ ಬೆಟಗೇರಿ, ಮಹೇಶ, ವಿನಾಯಕ ಮತ್ತು ನಜೀರ್ ಪಠಾಣೆ ಎಂಬುವರು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು
ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
;Resize=(690,390))
;Resize=(128,128))
;Resize=(128,128))
;Resize=(128,128))