ನಕಲಿ ದಾಖಲೆಗಳನ್ನು ಬಳಸಿಕೊಂಡು ಅಕ್ರಮವಾಗಿ ಘನತ್ಯಾಜ್ಯವನ್ನು ಸಾಗಿಸಿ ಎಲ್ಲೆಂದರಲ್ಲೇ ಸುರಿಯುತ್ತಿದ್ದ ಆರು ವಾಹನಗಳನ್ನು ಜಪ್ತಿ ಮಾಡಿರುವ ಪೂರ್ವ ನಗರ ಪಾಲಿಕೆ ಅಧಿಕಾರಿಗಳು, ನೌಶಾದ್ ಎಂಬುವರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

 ಬೆಂಗಳೂರು : ನಕಲಿ ದಾಖಲೆಗಳನ್ನು ಬಳಸಿಕೊಂಡು ಅಕ್ರಮವಾಗಿ ಘನತ್ಯಾಜ್ಯವನ್ನು ಸಾಗಿಸಿ ಎಲ್ಲೆಂದರಲ್ಲೇ ಸುರಿಯುತ್ತಿದ್ದ ಆರು ವಾಹನಗಳನ್ನು ಜಪ್ತಿ ಮಾಡಿರುವ ಪೂರ್ವ ನಗರ ಪಾಲಿಕೆ ಅಧಿಕಾರಿಗಳು, ನೌಶಾದ್ ಎಂಬುವರ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳಿಂದ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ

ಪೂರ್ವ ನಗರ ಪಾಲಿಕೆಯ ವಿವಿಧ ಪ್ರದೇಶಗಳ ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳಿಂದ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲು ಇಕೋ ಸ್ಪೀಯರ್ ವೆಸ್ಟ್ ಸೆಲ್ಯೂಷನ್ ಹೆಸರಿನ ಕಂಪನಿ ಗುತ್ತಿಗೆ ಪಡೆದುಕೊಂಡಿದೆ. ಆದರೆ, ಆರೋಪಿ ನೌಶಾದ್ ಮತ್ತು ಆತನ ಸಹಚರರು ಇಕೋ ಕಂಪನಿಯ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಬಳಸಿಕೊಂಡು ವಿವಿಧ ಪ್ರದೇಶಗಳಿಂದ ಅನಧಿಕೃತವಾಗಿ ತ್ಯಾಜ್ಯವನ್ನು ಸಂಗ್ರಹಿಸುತ್ತಿದ್ದರು. ಆ ಕಸವನ್ನು ಕಾಡುಗೋಡಿ ವ್ಯಾಪ್ತಿಯ ಸಿದ್ದಾರ್ಥ ಲೇಔಟ್ ಸಮೀಪದ ದಕ್ಷಿಣ ಪಿನಾಕಿನಿ ನದಿ ಮತ್ತಿತರ ಪ್ರದೇಶಗಳಲ್ಲಿ ಸುರಿಯುತ್ತಿದ್ದರು.

ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆ

ಈ ಬಗ್ಗೆ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಮೇ 29ರಂದು ವಿಶೇಷ ಕಾರ್ಯಾಚರಣೆ ಕೈಗೊಂಡು ಅಕ್ರಮವಾಗಿ ತ್ಯಾಜ್ಯ ಸುರಿಯಲು ಸ್ಥಳಕ್ಕೆ ಆಗಮಿಸಿದ್ದ ತ್ಯಾಜ್ಯ ತುಂಬಿರುವ 5 ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ವಾಹನ ಚಾಲಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಇದೇ ಸ್ಥಳದಲ್ಲಿ ಮೇ 30ರಂದು ಮತ್ತೊಂದು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರು, ಸಂಬಂಧಪಟ್ಟ ವ್ಯಕ್ತಿಗಳು ಹಾಗೂ ತ್ಯಾಜ್ಯ ಸುರಿಯಲು ಅವಕಾಶ ನೀಡಿದ ಭೂ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಆಯುಕ್ತರು ಹೇಳಿದ್ದಾರೆ.