ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ₹60 ಕೋಟಿ ಅನುದಾನ: ಶಾಸಕ ಕೆ.ಎಸ್.ಬಸವಂತಪ್ಪ

| Published : Mar 17 2024, 01:47 AM IST

ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ₹60 ಕೋಟಿ ಅನುದಾನ: ಶಾಸಕ ಕೆ.ಎಸ್.ಬಸವಂತಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಅಲ್ಪಸಂಖ್ಯಾತರ ಇಲಾಖೆಯಡಿ 5 ಕೋಟಿ ಅನುದಾನ ಸೇರಿ ಒಟ್ಟು ಕ್ಷೇತ್ರದ ಅಭಿವೃದ್ಧಿಗೆ 60 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿರುವುದರಿಂದ ವಿಶೇಷ ಗಮನ ಹರಿಸಿ ಈಗ ರಸ್ತೆಗಳ ಅಭಿವೃದ್ಧಿಗೆ ಮುಂದಾಗಿದ್ದು, ಈಗಾಗಲೇ ರಸ್ತೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಿಸಲಾಗುವುದು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದುರಸ್ತಿಯಾದ ರಸ್ತೆಗಳ ಅಭಿವೃದ್ಧಿ ಮತ್ತು ಶಾಲೆ, ಕಾಲೇಜು, ಭವನ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಅಂದಾಜು ೬೦ ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದರು.

ತಾಲೂಕಿನ ಕಂದಗಲ್ಲು ಗ್ರಾಮದಲ್ಲಿ ಶನಿವಾರ 50 ಲಕ್ಷ ವೆಚ್ಚದ 2.5 ಕಿ.ಮೀ. ದೂರದ ಕಂದಗಲ್ಲು-ಬೆಳ್ಳಿಗನೂಡು ಗ್ರಾಮಗಳ ಸಂಪರ್ಕ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ರಸ್ತೆ ಹಾಳಾಗಿದ್ದವು. ಅಲ್ಲದೇ ಶಾಲೆ, ಕಾಲೇಜು, ಭವನ ನಿರ್ಮಾಣ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಅಧಿವೇಶನದಲ್ಲಿ ಚರ್ಚಿಸಿ ಸಂಬಂಧಪಟ್ಟ ಸಚಿವರ ಗಮನ ಸೆಳೆಯಲಾಗಿತ್ತು ಎಂದರು.

ಈಗ ಕ್ಷೇತ್ರದ ವ್ಯಾಪ್ತಿಯ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಡಿ 25 ಕೋಟಿ ರು., ಲೋಕೋಪಯೋಗಿ ಇಲಾಖೆಯಡಿ 20 ಕೋಟಿ ರು. ಅನುದಾನ ಬಿಡುಗಡೆಗೆ ಸರ್ಕಾರ ಮಂಜೂರಾತಿ ನೀಡಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಇಲಾಖೆಯಡಿ 5 ಕೋಟಿ ಅನುದಾನ ಸೇರಿ ಒಟ್ಟು ಕ್ಷೇತ್ರದ ಅಭಿವೃದ್ಧಿಗೆ 60 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿರುವುದರಿಂದ ವಿಶೇಷ ಗಮನ ಹರಿಸಿ ಈಗ ರಸ್ತೆಗಳ ಅಭಿವೃದ್ಧಿಗೆ ಮುಂದಾಗಿದ್ದು, ಈಗಾಗಲೇ ರಸ್ತೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಕಳಪೆ ಕಾಮಗಾರಿ ಆಗಿದೆ ಎಂದು ದೂರುವ ಬದಲು ನೀವು, ಕೂಡ ಗುಣಮಟ್ಟ ಕಾಮಗಾರಿ ಆಗುವಂತೆ ಆಗಾಗ ಗ್ರಾಮಸ್ಥರು, ಸ್ಥಳೀಯರು ಪರಿಶೀಲಿಸುತ್ತಿರಬೇಕು. ಪ್ರಜ್ಞಾವಂತರು, ಸಾರ್ವಜನಿಕರು ಜಾಗೃತರಾಗಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸಲು ಸಾಧ್ಯವಾಗುತ್ತದೆ ಎಂದು ಕೆ.ಎಸ್.ಬಸವಂತಪ್ಪ ಸಲಹೆ ನೀಡಿದರು.

ಲ್ಯಾಂಡ್ ಆರ್ಮಿ ಇಂಜಿನಿಯರ್ ರೇಣುಕಪ್ಪ, ಇಂಜಿನಿಯರ್ ವಸಂತಕುಮಾರ, ಹಾಲೇಶಣ್ಣ, ಗಂಗಜ್ಜ, ವೀರಾಚಾರಿ, ಚಂದ್ರಪ್ಪ, ಜಯಬಾಬಣ್ಣ, ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರಿದ್ದರು.