ಪಾಲಿಕೆ ಶಾಲಾ ಕಾಲೇಜಿನಲ್ಲಿ ಶೇ.60 ದಾಖಲಾತಿ ಕುಸಿತ!

| Published : Jun 07 2024, 01:30 AM IST / Updated: Jun 07 2024, 12:55 PM IST

school

ಸಾರಾಂಶ

ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಆರಂಭಗೊಂಡಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರೀ ಇಳಿಕೆಯಾಗಿದೆ.

 ಬೆಂಗಳೂರು :  ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಆರಂಭಗೊಂಡಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರೀ ಇಳಿಕೆಯಾಗಿದೆ.

ಕೋವಿಡ್‌ ಸಂದರ್ಭದಲ್ಲಿ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಕಳೆದ 2023-24ನೇ ಸಾಲಿನಲ್ಲಿ ಬರೋಬ್ಬರಿ 23 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಕೇವಲ 9,467 ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಬಹುತೇಕ ಶೇ.60 ರಷ್ಟು ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ.

ಹಲವು ಗೊಂದಲ:ಬಿಬಿಎಂಪಿ ಶಾಲಾ ಕಾಲೇಜುಗಳನ್ನು ಶಿಕ್ಷಣ ಇಲಾಖೆ ಹಸ್ತಾಂತರಿಸುವುದು, ಹೊರ ಗುತ್ತಿಗೆ ಶಿಕ್ಷಕರ ನೇಮಕ ಸೇರಿದಂತೆ ಹಲವು ವಿಚಾರದಲ್ಲಿ ಗೊಂದಲ ಉಂಟಾಗಿರುವುದು ವಿದ್ಯಾರ್ಥಿಗಳ ದಾಖಲಾತಿ ಮೇಲೆ ಪರಿಣಾಮ ಉಂಟಾಗಿದೆ. ಈ ಕಾರಣಕ್ಕೆ ಶೇ.25 ರಷ್ಟು ದಾಖಲಾತಿ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬಿಬಿಎಂಪಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ ದಾಖಲಾತಿ ಅಭಿಯಾನವನ್ನು ಶಾಲಾ-ಕಾಲೇಜು ಮಟ್ಟದಲ್ಲಿ ನಡೆಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯ ಪೂರಕ ಪರೀಕ್ಷೆ ಬಾಕಿ ಇದೆ. ಶೈಕ್ಷಣಿಕ ವರ್ಷದ ಮೊದಲ ಕಿರಿ ಪರೀಕ್ಷೆ ಜುಲೈ ಕೊನೆಯ ವಾರದಲ್ಲಿ ನಡೆಯಲಿದ್ದು, ಅಲ್ಲಿಯವರೆಗೆ ದಾಖಲಾತಿಗೆ ಅವಕಾಶವಿದೆ. ನಿರೀಕ್ಷೆಯಂತೆ ದಾಖಲಾತಿ ಆಗಲಿದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.ಬಿಬಿಎಂಪಿ ಶಾಲಾ-ಕಾಲೇಜು ದಾಖಲಾತಿ ವಿವರ

ಶಾಲಾ-ಕಾಲೇಜು.

ದಾಖಲಾತಿ ಸಂಖ್ಯೆ

ಶಿಶು ವಿಹಾರ.

935

ಪ್ರಾಥಮಿಕ ಶಾಲೆ.

1360

ಪ್ರೌಢಶಾಲೆ.

1230

ಪದವಿ ಪೂರ್ವ.

4279

ಪದವಿ.

1565

ಸ್ನಾತಕೋತ್ತರ ಪದವಿ.

98

ಒಟ್ಟು.

9,467