ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ: ಎಡಿಸಿ ಶಿವಕುಮಾರ ಶೀಲವಂತ

| Published : Oct 25 2024, 12:47 AM IST

ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ: ಎಡಿಸಿ ಶಿವಕುಮಾರ ಶೀಲವಂತ
Share this Article
  • FB
  • TW
  • Linkdin
  • Email

ಸಾರಾಂಶ

ಬೀದರ್‌ ನಗರದ ಅಂಗಡಿ ಮುಂಗಟ್ಟುಗಳ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಸಬೇಕೆಂದು ಸೂಚಿಸಲು ಜಾಥಾ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿದೇಯಕ-2024 ರನ್ವಯ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಕಡ್ಡಾಯವಾಗಿ ಅಳವಡಿಸ ಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಸಂಸ್ಕೃತಿ ಇಲಾಖೆ, ನಗರ ಸಭೆ, ವಾರ್ತಾ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್, ಕನ್ನಡಪರ ಸಂಘಟನೆಗಳೊಂದಿಗೆ ಕಾಲ್ನಡಿಗೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಧಿಕಾರಿಗಳು, ಕನ್ನಡಪರ ಸಂಘಟನೆಗಳು ಮೀನಾ ಬಜಾರ್‌ದಿಂದ ರೋಟರಿ ವೃತ್ತ, ಮಡಿವಾಳ ವೃತ್ತ, ವೆಂಕಟೇಶ್ವರ ಮಾಲ್, ಬಸ್ ನಿಲ್ದಾಣ, ವಿಜಯಲಕ್ಷ್ಮೀ ಸಾರಿ ಸೆಂಟರ್‌ ಮಾರ್ಗವಾಗಿ ಜಾಥಾ ಸಂಚರಿಸಿ ಅಲ್ಲಿಯ ಅಂಗಡಿ, ವಾಣಿಜ್ಯ ಸಂಕೀರ್ಣದ ವ್ಯವಸ್ಥಾಪಕರು ಹಾಗೂ ಅಂಗಡಿಗಳ ಮಾಲೀಕರಿಗೆ ಮಾಹಿತಿ ನೀಡಿ ಕಡ್ಡಾಯವಾಗಿ ಶೇ.60ರಷ್ಟು ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಚಿಸಿದರು.

ಈ ಕಾಲ್ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ರೇವಣ ಸಿದ್ದಪ್ಪಾ ಜಲಾದೆ, ವೀರುಪಾಕ್ಷ ಗಾದಗಿ, ಎಂ.ಎಸ್.ಮನೋಹರ, ಕನ್ನಡ ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ, ಸಂತೋಷ ಜೋಳದಾಪಕೆ, ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಡಿವಾಯ್‌ಎಸ್‌ಪಿ ಸಿದ್ದನಗೌಡ ಪಾಟೀಲ್, ಸಿಪಿಐ ವಿಜಯ ಕುಮಾರ ಭಾವನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಸುಳ್ಳಳ್ಳಿ ಸೇರಿದಂತೆ ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪೀಟರ ಚಿಟಗುಪ್ಪಾ, ಕನ್ನಡಪರ ಸಂಘನೆಗಳ ಮುಖ್ಯಸ್ಥರು, ಅಧಿಕಾರಿಗಳು ಪಾಲ್ಗೊಂಡಿದ್ದರು.