ಸಾರಾಂಶ
ಹಂಪಿಯ ಪುರಂದರದಾಸರ ಮಂಟಪ ಜಲಾವೃತಗೊಂಡಿದ್ದು, ಆನೆಗೊಂದಿ ಹಾಗೂ ಬೃಂದಾವನ ನಡುವೆ ಸಂಪರ್ಕ ಕಡಿತ
ಮುನಿರಾಬಾದ್: ಮಲೆನಾಡಿನಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗುತ್ತಿದೆ.
ಭಾನುವಾರ ತುಂಗಭದ್ರಾ ಜಲಾಶಯ ಮಂಡಳಿ ಅಧಿಕಾರಿಗಳು 26 ಗೇಟ್‌ಗಳ ಪೈಕಿ 14 ಗೇಟ್‌ಗಳ ಮೂಲಕ ನದಿಗೆ 60,000 ಕ್ಯುಸೆಕ್ ನೀರನ್ನು ಹರಿಸಿದ್ದಾರೆ. ತುಂಗಭದ್ರಾ ಜಲಾಶಯಕ್ಕೆ 80,000 ಕ್ಯುಸೆಕ್ ನೀರು ಹರಿದು ಬರುತ್ತಿದೆ.ನದಿ ಪಾತ್ರದಲ್ಲಿ ಪ್ರವಾಹದ ಸ್ಥಿತಿ
ಹಂಪಿಯ ಪುರಂದರದಾಸರ ಮಂಟಪ ಜಲಾವೃತಗೊಂಡಿದ್ದು, ಆನೆಗೊಂದಿ ಹಾಗೂ ಬೃಂದಾವನ ನಡುವೆ ಸಂಪರ್ಕ ಕಡಿತವಾಗಿದೆ. ಇನ್ನು ಮೂರು ನಾಲ್ಕು ದಿನ ಪ್ರವಾಹ ಪರಿಸ್ಥಿತಿ ಮುಂದುವರಿಯಲಿದೆ ಎಂಬ ಮಾಹಿತಿ ''''ಕನ್ನಡಪ್ರಭ''''ಕ್ಕೆ ಲಭಿಸಿದೆ.