ಸಾರಾಂಶ
ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರ 62 ನೇ ಜನ್ಮವರ್ಧಂತಿಯನ್ನು ಸರಳವಾಗಿ ಆಚರಿಸಿಕೊಂಡರು.
ತುಮಕೂರು: ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರ 62 ನೇ ಜನ್ಮವರ್ಧಂತಿಯನ್ನು ಸರಳವಾಗಿ ಆಚರಿಸಿಕೊಂಡರು.ಯಾವುದೇ ಸಾರ್ವಜನಿಕ ಕಾರ್ಯಕ್ರಮ ಆಯೋಜನೆಯಿಲ್ಲದೆ ಜನ್ಮವರ್ಧಂತಿ ನಡೆಯಿತು. ಶ್ರೀಗಳ 62ನೇ ಜನ್ಮವರ್ಧಂತಿ ಅಂಗವಾಗಿ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ವಿವಿಧ ಮಠಾಧೀಶರು ಶ್ರೀಗಳ ಪಾದಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು. ಶ್ರೀಗಳ ಜನ್ಮವರ್ದಂತಿ ಅಂಗವಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿಇಓ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.