ಸೆಪ್ಟಂಬರ್ ಮೊದಲನೇ ವಾರ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

| Published : Jul 25 2025, 12:30 AM IST

ಸೆಪ್ಟಂಬರ್ ಮೊದಲನೇ ವಾರ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
Share this Article
  • FB
  • TW
  • Linkdin
  • Email

ಸಾರಾಂಶ

ಸೆಪ್ಟಂಬರ್ ಮೊದಲ ವಾರ 6 ನೇ ತಾಲೂಕು ಕನ್ನಡ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ.ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕನ್ನಡಪ್ರಭವಾರ್ತೆ, ತುರುವೇಕೆರೆ

ಸೆಪ್ಟಂಬರ್ ಮೊದಲ ವಾರ 6 ನೇ ತಾಲೂಕು ಕನ್ನಡ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ.ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಈಗಾಗಲೇ ತಾಲೂಕಿನಲ್ಲಿ 5 ಸಮ್ಮೇಳನಗಳು ಯಶಸ್ವಿಯಾಗಿ ಜರುಗಿವೆ. ತಾಲೂಕಿನಲ್ಲಿ ಹಲವಾರು ಮಂದಿ ಕನ್ನಡ ಸೇವೆ ಮಾಡಿದ್ದಾರೆ. ಕನ್ನಡ ಭಾಷೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ತಾಲೂಕಿನಲ್ಲಿ ಕನ್ನಡದ ಉಳಿವಿಗಾಗಿ ಹಲವಾರು ಮಂದಿ ದುಡಿದಿದ್ದಾರೆ. ಇವೆಲ್ಲವನ್ನೂ ಪರಿಗಣಿಸಿ 6 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನೂ ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಯಿತು.

ಸಮ್ಮೇಳನದ ಸಲುವಾಗಿ ವಿವಿಧ ಸಮಿತಿಗಳನ್ನು ರಚಿಸಬೇಕಿದೆ. ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆಯಾಗಬೇಕಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಸಭೆ ಸೇರಿ ಸಮಿತಿಗಳ ರಚನೆ ಮಾಡಲು ನಿರ್ಧರಿಸಲಾಯಿತು. ತಾಲೂಕು ಸಮ್ಮೇಳನ ಯಶಸ್ವಿಯಾಗಿ ನಡೆಯಲು ಅಗತ್ಯವಿರುವ ಹಣಕಾಸು ಸಂಗ್ರಹ ಮಾಡಲು ತಾಲೂಕು ಕಸಾಪ ಅಧ್ಯಕ್ಷ ಡಿ.ಪಿ.ರಾಜು ನೇತೃತ್ವದಲ್ಲಿ ಸಮಿತಿ ರಚಿಸಲಾಯಿತು.

ತಹಸೀಲ್ದಾರ್ ಎನ್.ಎ. ಕುಂಇ ಅಹಮದ್, ಬಿಇಓ ಸೋಮಶೇಖರ್, ಕನ್ನಡ ಸಾಹಿತ್ಯ ಪರಿಷತ್ ನ ಗೌರವಾಧ್ಯಕ್ಷ ಟಿ.ಎಸ್.ಬೋರೇಗೌಡ ಸೇರಿದಂತೆ ಹಲವಾರು ಇಲಾಖಾ ಅಧಿಕಾರಿಗಳು ಹಾಜರಿದ್ದರು.