ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ 7.60 ಕೋಟಿ ರು.

| Published : May 22 2025, 12:45 AM IST

ಸಾರಾಂಶ

ಉಪ್ಪಿನಹಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ,

ಕನ್ನಡಪ್ರಭ ವಾರ್ತೆ ನಂಜನಗೂಡುನಂಜನಗೂಡು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಂಬೇಡ್ಕರ್ ಭವನಗಳ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 7.60 ಕೋಟಿ ಅನುದಾನ ಮಂಜೂರಾಗಿದ್ದು, ಈಗಾಗಲೇ 30 ಭವನಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.ತಾಲೂಕಿನ ಉಪ್ಪಿನಹಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ಮಾಡ್ರಳ್ಳಿ ಗ್ರಾಮದಲ್ಲಿ 20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ಶ್ರೀನಗರ ಗ್ರಾಮದಲ್ಲಿ 15 ಲಕ್ಷ ವೆಚ್ಚದಲ್ಲಿ ಪ. ಜಾತಿ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 55 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಎಲ್ಲ ಅಂಬೇಡ್ಕರ್ ಸಮುದಾಯ ಭವನಗಳ ಕಾಮಗಾರಿ ಪೂರ್ಣಗೊಳಿಸುವ ಜೊತೆಗೆ ಹೊಸದಾಗಿ ಸಮುದಾಯ ಭವನ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು 7.60 ಕೋಟಿ ರು. ಅನುದಾನ ಬಿಡುಗಡೆ ಮಾಡಿಕೊಟ್ಟಿದ್ದಾರೆ, ಈಗಾಗಲೇ ಸುಮಾರು 30 ಗ್ರಾಮಗಳಲ್ಲಿ ಹೊಸದಾಗಿ ಅಂಬೇಡ್ಕರ್ ಸಮುದಾಯ ಭವನಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಉಳಿದ ಸಮುದಾಯ ಭವನಗಳನ್ನು ಶೀಘ್ರದಲ್ಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದರು.ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಮಹೇಶ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಣ್ಣ, ಗ್ರಾಪಂ ಉಪಾಧ್ಯಕ್ಷ ನಂಜಪ್ಪ, ಗ್ರಾಪಂ ಸದಸ್ಯರಾದ ಮುದ್ದುಮಾದಶೆಟ್ಟಿ, ನಾರಾಯಣಸ್ವಾಮಿ ಇದ್ದರು.