ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಗೃಹಲಕ್ಷ್ಮಿ ಹಣ :7, 9ಕ್ಕೆ ಎರಡು ತಿಂಗಳ ಹಣ ಖಾತೆಗೆ

| Published : Oct 04 2024, 01:21 AM IST / Updated: Oct 04 2024, 03:13 PM IST

Lakshmi hebbalkar
ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಗೃಹಲಕ್ಷ್ಮಿ ಹಣ :7, 9ಕ್ಕೆ ಎರಡು ತಿಂಗಳ ಹಣ ಖಾತೆಗೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಿಸಿದರು.

  ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಕಟಿಸಿದರು.

ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ತಿಂಗಳ ಕಂತಿನ ಹಣ ಹಾಕಲಾಗುವುದು. 

ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು. ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸ ಮಾಡದೇ ಬಿಡಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ಮಗಳು ತುಂಬಾ ಖಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆ ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಎಂದು ಎದಿದ್ದಾರೆ. 

ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು. ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರಿಗೆ ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ಹೇಳಿದರು.