ಸಾರಾಂಶ
ತಾಲೂಕಿನ ಭದ್ರಾ ಹಿನ್ನೀರಿಗೆ 7 ಲಕ್ಷ ಮೀನು ಮರಿ ಬಿಡುವ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಶನಿವಾರ ಲಿಂಗಾಪುರ ಗ್ರಾಮದ ಮೀನು ಕ್ಯಾಂಪ್ ಸಮೀಪದ ಭದ್ರಾ ಹಿನ್ನೀರಿಗೆ ಮೀನು ಮರಿಗಳನ್ನು ಬಿಡುವ ಮೂಲಕ ಚಾಲನೆ ನೀಡಿದರು.
ನರಸಿಂಹರಾಜಪುರ: ತಾಲೂಕಿನ ಭದ್ರಾ ಹಿನ್ನೀರಿಗೆ 7 ಲಕ್ಷ ಮೀನು ಮರಿ ಬಿಡುವ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಶನಿವಾರ ಲಿಂಗಾಪುರ ಗ್ರಾಮದ ಮೀನು ಕ್ಯಾಂಪ್ ಸಮೀಪದ ಭದ್ರಾ ಹಿನ್ನೀರಿಗೆ ಮೀನು ಮರಿಗಳನ್ನು ಬಿಡುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿ ಪ್ರಕಾಶ್, ಗ್ರಾಪಂ ಸದಸ್ಯ ಬಿನು,ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್.ಸದಾಶಿವ, ತಾಲೂಕು ಬಗರ್ ಹುಕಂ ಸಮಿತಿ ಅಧ್ಯಕ್ಷ ಇ.ಸಿ.ಜೋಯಿ, ಕಾಂಗ್ರೆಸ್ ಪಕ್ಷದ ನಗರ ಘಟಕ ಅಧ್ಯಕ್ಷ ಬಿಳಾಲು ಮನೆ ಉಪೇಂದ್ರ, ಕಾಂಗ್ರೆಸ್ ಪಕ್ಷದ ಮುಖಂಡ ದೇವಂತಗೌಡ ಮತ್ತಿತರರು ಇದ್ದರು.