ಸಾರಾಂಶ
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಏಳು ಸಾವಿರ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಏಳು ಸಾವಿರ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 2018ರಿಂದ ಹೊರಾಂಗಣ ಜಾಹೀರಾತು ಅಳವಡಿಕೆ ನಿಷೇಧಿಸಲಾಗಿದೆ. ಕೇವಲ ಖಾಸಗಿ ಸಹಭಾಗಿತ್ವದಲ್ಲಿ ಅಳವಡಿಸಿದ ಜಾಹೀರಾತು ಫಲಕಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೂ ನಗರದಲ್ಲಿ ಅನಧಿಕೃತವಾಗಿ ಅಳವಡಿಕೆ ಮಾತ್ರ ನಿಂತಿಲ್ಲ.
ಜೂನ್ 1 ರಿಂದ ಜುಲೈ 7 ಅವಧಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ 6,877 ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ತೆರವು ಮಾಡಿರುವ ಬಿಬಿಎಂಪಿ ಅಧಿಕಾರಿ ಸಿಬ್ಬಂದಿ, ಈ ಸಂಬಂಧ 116 ಪ್ರಕರಣಗಳಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅನಧಿಕೃತವಾಗಿ ಜಾಹೀರಾತು ಅಳವಡಿಕೆ ಮಾಡಿದವರಿಂದ ₹85 ಸಾವಿರ ದಂಡ ವಸೂಲಿ ಮಾಡಲಾಗಿದೆ. ಮಹದೇವಪುರ ವಲಯದಲ್ಲಿಯೇ 3,309 ಫ್ಲೆಕ್ಸ್, ಬ್ಯಾನರ್ ತೆರವು ಮಾಡಲಾಗಿದೆ. ಉಳಿದಂತೆ ಆರ್‌ಆರ್‌ನಗರದಲ್ಲಿ 1206, ಬೊಮ್ಮನಹಳ್ಳಿ 826, ಯಲಹಂಕ 450, ದಾಸರಹಳ್ಳಿ 357, ಪೂರ್ವ 327, ದಕ್ಷಿಣ 313 ಹಾಗೂ ಪಶ್ಚಿಮ ವಲಯದಲ್ಲಿ 89 ಅಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವುಗೊಳಿಸಲಾಗಿದೆ ಎಂದು ಜಾಹೀರಾತು ವಿಭಾಗದ ಉಪ ಆಯುಕ್ತೆ ಗಾಯತ್ರಿ ನಾಯಕ ಮಾಹಿತಿ ನೀಡಿದ್ದಾರೆ.