ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ 70 ಅರ್ಜಿ ಸಲ್ಲಿಕೆ

| Published : Aug 03 2025, 01:30 AM IST

ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ 70 ಅರ್ಜಿ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಹೊಳೆನರಸೀಪುರ ತಾಲೂಕು ಕಚೇರಿ ಆವರಣದಲ್ಲಿ ಆಯೋಜನೆ ಮಾಡಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಕೆಯಾದವು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ ಕಂದಾಯ ಇಲಾಖೆಯ 58, ಪುರಸಭೆಯ 4, ತಾ.ಪಂ.ಯ 2, ಅರಣ್ಯ ಇಲಾಖೆಯ 3, ಅಬಕಾರಿಯ 1, ವಿದ್ಯುತ್ ಇಲಾಖೆಯ 2, ಅಲ್ವಸಂಖ್ಯಾತ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದ್ದು, ಇವರುಗಳಿಗೆ 7 ದಿನದಲ್ಲಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಆಯೋಜನೆ ಮಾಡಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಕೆಯಾದವು.

ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜಿಲ್ಲಾಧಿಕಾರಿಗಳು ನಿರ್ದೇಶನದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಆಯೋಜನೆ ಮಾಡಿದ್ದ ಜನಸ್ಪಂದನ ಸಭೆಗೆ ಜನರ ನಿರುತ್ಸಾಹವು ಅಧಿಕಾರಿಗಳ ಉತ್ಸಾಹಕ್ಕೆ ತಣ್ಣೀರೆರೆಚಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿ ಇರುವ ತಾಲೂಕಿನ 32 ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಸಮಸ್ಯೆಗಳು ಇದ್ದಲ್ಲಿ ಅವುಗಳನ್ನು ಪರಿಹರಿಸಿಕೊಳ್ಳಲು ಒಂದೇ ಸೂರಿನಡಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿತ್ತು. ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಸರ್ಕಾರದ ಮಾರ್ಗಸೂಚಿ ಅನುಸಾರ ವಿಲೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿತ್ತು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ ಕಂದಾಯ ಇಲಾಖೆಯ 58, ಪುರಸಭೆಯ 4, ತಾ.ಪಂ.ಯ 2, ಅರಣ್ಯ ಇಲಾಖೆಯ 3, ಅಬಕಾರಿಯ 1, ವಿದ್ಯುತ್ ಇಲಾಖೆಯ 2, ಅಲ್ವಸಂಖ್ಯಾತ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದ್ದು, ಇವರುಗಳಿಗೆ 7 ದಿನದಲ್ಲಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದು ತಿಳಿಸಿದರು.ತಾಪಂ ಇಒ ಮುನಿರಾಜು, ಪುರಸಭೆ ಮುಖ್ಯಾಧಿಕಾರಿ ಶಿವಶಂಕರ್, ಬಿಇಒ ಜಿ.ಎನ್.ಸೋಮಲಿಂಗೇಗೌಡ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸುರೇಶ ಸಿ, ಉಪ ತಹಸೀಲ್ದಾರ್ ರೂಪೇಶ್, ಉಪ ನೋಂದಣಾಧಿಕಾರಿ ರಾಕೇಶ್, ಕೃಷಿ ಇಲಾಖೆ ಅಧಿಕಾರಿ ಸವಿತಾ,ದಾಅಹಾರ ಶಿರಸ್ತೇದಾರ್ ವಾಸು, ಕಂದಾಯ ಇಲಾಖೆಯ ಪ್ರಸಾದ್, ರೋಷನ್, ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.