ಕನ್ನಡ ಮರೆಯದೆ ಬೇರೆ ಭಾಷೆ ಕಲಿಕೆ ತಪ್ಪಲ್ಲ

| Published : Nov 07 2025, 01:15 AM IST

ಕನ್ನಡ ಮರೆಯದೆ ಬೇರೆ ಭಾಷೆ ಕಲಿಕೆ ತಪ್ಪಲ್ಲ
Share this Article
  • FB
  • TW
  • Linkdin
  • Email

ಸಾರಾಂಶ

ಈ ದಿನದಂದು ನಾವು ನಮ್ಮ ಗತಕಾಲದ ಹೆಮ್ಮೆಯನ್ನು ನೆನಪಿಸಿಕೊಳ್ಳುವುದರ ಜೊತೆಗೆ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಒಟ್ಟಾಗಿ ಶ್ರಮಿಸುವ ಪ್ರತಿಜ್ಞೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಬೇರೆ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಕನ್ನಡವನ್ನು ಮರೆಯಬಾರದು ಎಂದು ಸಾಹಿತಿ ಡಾ. ಯಲ್ಲಪ್ಪ ಕೆ.ಕೆ. ಪುರ ತಿಳಿಸಿದರು.ನಗರದ ಸರಸ್ವತಿಪುರಂನಲ್ಲಿರುವ ದಿ ಇನ್ಸಿ ಟಿಟ್ಯೂಟ್ ಆಫ್ ಎಜುಕೇಷನ್ ಓಂಕಾರ್‌ ಮಲ್ ಸೋಮಾನಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಯ ಸೊಗಡು, ಸಾಹಿತ್ಯದ ವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಕನ್ನಡ ನಾಡು- ನುಡಿ ಬಗ್ಗೆ ಅಭಿಮಾನವನ್ನು ಬೆಳೆಸಿ, ಅವುಗಳ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಸಂಕಲ್ಪವನ್ನು ಈ ದಿನದಂದು ನಾವು ಕೈಗೊಳ್ಳಬೇಕು ಎಂದರು. ಕನ್ನಡ ರಾಜ್ಯೋತ್ಸವವು ಕೇವಲ ಒಂದು ಆಚರಣೆಯಲ್ಲ, ಇದು ಕನ್ನಡಿಗರ ಅಸ್ಮಿತೆಯನ್ನು ಪ್ರತಿಬಿಂಬಿಸುವ ಸಂಭ್ರಮದ ಹಬ್ಬ. ಈ ದಿನದಂದು ನಾವು ನಮ್ಮ ಗತಕಾಲದ ಹೆಮ್ಮೆಯನ್ನು ನೆನಪಿಸಿಕೊಳ್ಳುವುದರ ಜೊತೆಗೆ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಒಟ್ಟಾಗಿ ಶ್ರಮಿಸುವ ಪ್ರತಿಜ್ಞೆ ಮಾಡಬೇಕು. ನಮ್ಮ ರಾಜ್ಯದ ಪ್ರಗತಿ ಮತ್ತು ಸಾಮಾಜಿಕ ಸಾಮರಸ್ಯಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡೋಣ ಎಂದು ಅವರು ಕರೆ ನೀಡಿದರು.ಕಾಲೇಜಿನ ಆಡಳಿ ತಮಂಡಳಿ ಅಧ್ಯಕ್ಷ ಎಂ. ಪುಟ್ಟಸ್ವಾಮಿ ಮಾತನಾಡಿ, ಕನ್ನಡ ಕೇವಲ ಭಾಷೆಯಾಗದೆ ಭಾವನೆಯೂ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಕನ್ನಡದ ಸ್ಥಿತಿಗತಿ ಬದಲಾಗಿದೆ. ಕನ್ನಡ ನಮ್ಮ ಉಸಿರಾಗಿರಬೇಕು. ಎಂತಹ ಸಂದರ್ಭದಲ್ಲೂ ಕನ್ನಡ ಬಿಟ್ಟುಕೊಡಬಾರದು. ಬೇರೆ ಭಾಷೆಗಳನ್ನು ಕಲಿಯುವುದು ಖಂಡಿತ ತಪ್ಪಲ್ಲ. ಆದರೆ, ಬೇರೆ ಭಾಷೆ ಕಲಿತು ಕನ್ನಡ ಮರೆಯುವುದು ತಪ್ಪು ಎಂದು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲೆ ಡಾ.ಆರ್.ಜಿ. ಉಷಾ ಮಾತನಾಡಿ, ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೆ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರ ದಲ್ಲಿ ಕನ್ನಡವನ್ನೇ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರೋಣ ಎಂದು ಹೇಳಿದರು.ಸಂಯೋಜಕಿ ಡಾ.ಎಂ. ವಿನುತಾ, ಸಹಾಯಕ ಪ್ರಾಧ್ಯಾಪಕರು, ಬೋಧಕೇತರರು ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.