ಸಾರಾಂಶ
ಧಾರ್ಮಿಕ ದತ್ತಿ ಇಲಾಖೆ ನಿಯಮಾನುಸಾರ ಹುಂಡಿ ಹಣ ಎಣಿಕೆ ನಡೆದಿದ್ದು, ಹಣ ಎಣಿಕೆ ಕಾರ್ಯದಲ್ಲಿ ಭಕ್ತಾದಿಗಳು ಪಾಲ್ಗೊಂಡರು.
ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆಯ ಹಣವನ್ನು ಎಣಿಕೆ ಮಾಡಲಾಗಿದ್ದು, ಈ ತಿಂಗಳು 75.3 ಲಕ್ಷ ರು. ಹಣ ಸಂಗ್ರಹವಾಗಿದೆ. ಹುಂಡಿಯಲ್ಲಿ ಒಟ್ಟು 75,30,068 ರು. ಸಂಗ್ರಹವಾಗಿದ್ದು, 76,500 ರು. ಮೌಲ್ಯದ 2 ಕೆಜಿ 250 ಗ್ರಾಂ ಬೆಳ್ಳಿ, 18,900 ರು. ಮೌಲ್ಯದ 3.6 ಗ್ರಾಂ ಚಿನ್ನಾಭರಣಗಳು ಸಂಗ್ರಹವಾಗಿವೆ. ಧಾರ್ಮಿಕ ದತ್ತಿ ಇಲಾಖೆ ನಿಯಮಾನುಸಾರ ಹುಂಡಿ ಹಣ ಎಣಿಕೆ ನಡೆದಿದ್ದು, ಹಣ ಎಣಿಕೆ ಕಾರ್ಯದಲ್ಲಿ ಭಕ್ತಾದಿಗಳು ಪಾಲ್ಗೊಂಡರು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣಸ್ವಾಮಿ, ತಹಸೀಲ್ದಾರ್ ಜೆ.ಜೆ. ಹೇಮಾವತಿ, ಪ್ರಧಾನ ಅರ್ಚಕ ಸುಬ್ರಮಣ್ಯ, ದೇವಾಲಯ, ಕೆನರಾ ಬ್ಯಾಂಕ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.